ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ನಿಮ್ಮ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ'- ರಾಜನಾಥ್ ಸಿಂಗ್

|
Google Oneindia Kannada News

ದೆಹಲಿ, ಜೂನ್ 17: ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹುತಾತ್ಮರಾದ ಯೋಧರ ಸಾವು ತೀವ್ರ ನೋವು ತಂದಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

Recommended Video

ಗಾಲ್ವಾನ್ ಘರ್ಷಣೆಯಲ್ಲಿ ಸತ್ತ ಚೀನಾ ಸೈನಿಕರ ಲೆಕ್ಕ ಕೊಟ್ಟ ಅಮೇರಿಕಾ | Oneindia Kannada

ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘಟನೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ರಾಜನಾಥ್ ಸಿಂಗ್ ಯೋಧರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Rajnath singh condolence to soldiers death at galwan valley incident

Breaking: ಚೀನಾ-ಭಾರತ ಸಂಘರ್ಷ: ಚೀನಾ ಕಮಾಂಡಿಂಗ್ ಅಧಿಕಾರಿ ಹತ್ಯೆ Breaking: ಚೀನಾ-ಭಾರತ ಸಂಘರ್ಷ: ಚೀನಾ ಕಮಾಂಡಿಂಗ್ ಅಧಿಕಾರಿ ಹತ್ಯೆ

''ಗಾಲ್ವಾನ್ ಕಣಿವೆ ಪ್ರದೇಶದ ನಡೆದ ಘಟನೆಯಲ್ಲಿ ಹುತಾತ್ಮರಾದ ಯೋಧರ ಸಾವು ನಮಗೆ ತೀವ್ರ ನೋವು ತಂದಿದೆ. ನಮ್ಮ ಸೈನಿಕರು ಗಡಿ ಕರ್ತವ್ಯದಲ್ಲಿ ಧೈರ್ಯ ಮತ್ತು ಶೌರ್ಯದಿಂದ ಹೋರಾಡಿದರು. ಭಾರತದ ಸೈನ್ಯದ ಉನ್ನತಮಟ್ಟದ ಸಂಪ್ರದಾಯದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ'' ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ''ಅವರ ಧೈರ್ಯ ಮತ್ತು ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ. ಹುತಾತ್ಮ ಯೋಧರ ಕುಟುಂಬಗಳಿಗೆ ನಮ್ಮ ಹೃದಯ ಮರುಗುತ್ತದೆ. ಇಂತಹ ಕಷ್ಟದ ಸ್ಥಿತಿಯಲ್ಲಿ ಇಡೀ ದೇಶ ಅವರ ಭುಜಕ್ಕೆ ಭುಜ ಕೊಟ್ಟು ನಿಲ್ಲುತ್ತದೆ. ಧೈರ್ಯಶಾಲಿ ಯೋಧರ ಬಗ್ಗೆ ನಮಗೆ ಹೆಮ್ಮೆ ಇದೆ'' ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಚೀನಾ-ಭಾರತ ಘರ್ಷಣೆ: ಇನ್ನೂ ನಾಲ್ಕು ಭಾರತೀಯ ಯೋಧರ ಸ್ಥಿತಿ ಗಂಭೀರಚೀನಾ-ಭಾರತ ಘರ್ಷಣೆ: ಇನ್ನೂ ನಾಲ್ಕು ಭಾರತೀಯ ಯೋಧರ ಸ್ಥಿತಿ ಗಂಭೀರ

ಸೋಮವಾರ ರಾತ್ರಿ ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ಭಾರತದ 20 ಯೋಧರ ಹುತಾತ್ಮರಾಗಿದ್ದಾರೆ. ಚೀನಾದ ಕಡೆ ಸುಮಾರು 43 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ, ಅಧಿಕೃತ ಮಾಹಿತಿ ಇಲ್ಲ.

English summary
Indian defense minister Rajnath Singh expressed his condolence to soldiers death at Galwan valley incident. 20 Indian soldiers dies in India and China fight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X