• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಖ್ನೋದಲ್ಲಿ600 ಹಾಸಿಗೆಗಳ 2 ಕೋವಿಡ್ ಆಸ್ಪತ್ರೆ ನಿರ್ಮಿಸಲು ಡಿಆರ್‌ಡಿಒಗೆ ಸೂಚನೆ

|

ನವದೆಹಲಿ, ಏಪ್ರಿಲ್ 16: ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಲಖ್ನೋದಲ್ಲಿ ಕೊರೊನಾ ರೋಗಿಗಳಿಗೆ 250-300 ಹಾಸಿಗೆಗಳ ಸೌಲಭ್ಯವಿರುವ ಎರಡು ಆಸ್ಪತ್ರೆಗಳನ್ನು ನಿರ್ಮಿಸುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಗೆ (ಡಿಆರ್‌ಡಿಒ) ಸೂಚನೆ ನೀಡಿದ್ದಾರೆ.

ಶುಕ್ರವಾರ ಲಖ್ನೋಗೆ ಡಿಆರ್‌ಡಿಒ ತಂಡ ಭೇಟಿ ನೀಡಲಿದ್ದು, ನಗರದ ಎರಡು ಕಡೆಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸುವುದಾಗಿ ತಿಳಿದುಬಂದಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಸುಮಾರು 600 ಹಾಸಿಗೆಗಳ ಸೌಲಭ್ಯವನ್ನು ಕಲ್ಪಿಸಲಾಗುವುದು. ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿ ಕೊರೊನಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್; ಮಾಸ್ಕ್ ಧರಿಸದಿದ್ದರೆ 10 ಸಾವಿರ ರೂ. ದಂಡಎಲ್ಲ ಜಿಲ್ಲೆಗಳಲ್ಲಿ ಕಠಿಣ ರೂಲ್ಸ್; ಮಾಸ್ಕ್ ಧರಿಸದಿದ್ದರೆ 10 ಸಾವಿರ ರೂ. ದಂಡ

ಉತ್ತರ ಪ್ರದೇಶದಲ್ಲಿ ಗುರುವಾರ 22,439 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನ 104 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗೂ 9,480 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 7,66,360 ಆಗಿದೆ. ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ.

ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್, ಸಾವಿರ ಹಾಸಿಗೆಗಳ ಕೋವಿಡ್ ಆಸ್ಪತ್ರೆಯನ್ನು ನಿರ್ಮಿಸುವಂತೆ ಶುಕ್ರವಾರ ಆದೇಶಿಸಿದ್ದಾರೆ.

English summary
Defence Minister Rajnath Singh has instructed DRDO to construct two hospitals, with 250-300 beds each, for COVID-19 patients in Lucknow
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X