ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

64 ವರ್ಷದ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ನಿಧನ

|
Google Oneindia Kannada News

ದೆಹಲಿ, ಆಗಸ್ಟ್ 1: ಮಾಜಿ ಸಮಾಜವಾದಿ ಪಕ್ಷದ ನಾಯಕ ಹಾಗೂ ಹಾಲಿ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅಮರ್ ಸಿಂಗ್ ಸಿಂಗಾಪುರದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಶಾಂತ್ ಸಿಂಗ್ ಕೇಸ್: ಮೋದಿಗೆ ಮನವಿ ಮಾಡಿದ ಸಹೋದರಿ ಶ್ವೇತಾಸುಶಾಂತ್ ಸಿಂಗ್ ಕೇಸ್: ಮೋದಿಗೆ ಮನವಿ ಮಾಡಿದ ಸಹೋದರಿ ಶ್ವೇತಾ

ಕಳೆದ ಏಳು ತಿಂಗಳ ಹಿಂದೆ ಸಿಂಗಾಪುರಕ್ಕೆ ಚಿಕಿತ್ಸೆಗಾಗಿ ಹೋಗಿದ್ದ ಅಮರ್ ಸಿಂಗ್, ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 2013ರಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅಮರ್ ಸಿಂಗ್ ಅವರ ನಿಧನಕ್ಕೆ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಂತಾಪ ಸೂಚಿಸಿದ್ದಾರೆ.

Rajya Sabha MP Amar Singh passes away at 64

ಅಮರ್ ಸಿಂಗ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಅಮರ್ ಸಿಂಗ್ ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಆಗ, ಅದು ಸುಳ್ಳು, ಟೈಗರ್ ಜಿಂದಾ ಹೈ ಎಂದು ಖುದ್ದು ಅವರೇ ಸ್ಪಷ್ಟನೆ ನೀಡಿದ್ದರು.

ಸ್ವಾತಂತ್ರ್ಯ ಹೋರಾಟಗಾರರ ಬಾಲಗಂಗಾಧರ ತಿಲಕ್ ಅವರ ಪುಣ್ಯ ತಿಥಿ ಅಂಗವಾಗಿ ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದರು. ಬಕ್ರೀದ್ ಹಬ್ಬಕ್ಕೂ ಶುಭಾಶಯ ಕೋರಿದ್ದರು.

ಅಮರ್ ಸಿಂಗ್ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಆಪ್ತರಾಗಿದ್ದರು. 2016 ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಇನ್ನು ಅಮರ್ ಸಿಂಗ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. 'ಅಮರ್ ಸಿಂಗ್ ಅವರು ಒಬ್ಬ ಸ್ನೇಹಜೀವಿ, ಈ ಸ್ನೇಹಿತನ ಅಗಲಿಕೆಯಿಂದ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ, ನಾವೆಲ್ಲ ಈದಿನ ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದ್ದೀವಿ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೀನಿ'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

English summary
Former Samajwadi party leader and Rajya Sabha MP Amar Singh passed away today in Singapore. He was 64 and had been hospitalised for a long time..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X