ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್

|
Google Oneindia Kannada News

ನವದೆಹಲಿ, ಜನವರಿ 13: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಗುರುವಾರ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

"ಮಲ್ಲಿಕಾರ್ಜುನ ಖರ್ಗೆಯವರು ಸೋಂಕು ಲಕ್ಷಣರಹಿತರಾಗಿದ್ದಾರೆ ಮತ್ತು ಮನೆಯಲ್ಲಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಅವರು ಸಂಪೂರ್ಣವಾಗಿ ಲಸಿಕೆಯನ್ನು ಹೊಂದಿದ್ದು, ಆದರೆ ಬೂಸ್ಟರ್ ಡೋಸ್‌ಗೆ ಇನ್ನೂ ಅರ್ಹರಾಗಿರಲಿಲ್ಲ,'' ಎಂದು ಮಲ್ಲಿಕಾರ್ಜುನ ಖರ್ಗೆ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೆಲ ದಿನಗಳ ಹಿಂದೆ ಕನಕಪುರದ ಸಂಗಮದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Rajya Sabha Opposition leader Mallikarjun Kharge tests positive for COVID-19

ಪಾದಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಂತಹ ಕಾಂಗ್ರೆಸ್ ನಾಯಕರಾದ ಡಾ.ಎಂ.ವೀರಪ್ಪ ಮೊಯಿಲಿ, ಮಲ್ಲಾಜಮ್ಮ, ಶಿವಶಂಕರ ರೆಡ್ಡಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈಗ ಹಿರಿಯ ನಾಯಕ ಖರ್ಗೆ ಅವರಿಗೂ ಪಾಸಿಟಿವ್ ಬಂದಿದೆ.

ಮಾಜಿ ಸಿಎಂ ವೀರಪ್ಪ ಮೊಯ್ಲಿಗೂ ಕೋವಿಡ್ ಪಾಸಿಟಿವ್
ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು ದೃಢಪಟ್ಟ ನಡುವೆಯೇ ಇನ್ನೊಬ್ಬ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ವೀರಪ್ಪ ಮೊಯ್ಲಿವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

Recommended Video

ಭಾರತಕ್ಕಿಂತ ಉತ್ತಮವಾಗಿದೆ ಪಾಕಿಸ್ತಾನದ ಆರ್ಥಿಕತೆ!! ನಿಜಾನಾ?? | Oneindia Kannada

ಈ ಇಬ್ಬರೂ ನಾಯಕರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು ಮತ್ತು ಪಾದಯಾತ್ರೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಮನಗರ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.

English summary
Leader of Opposition in Rajya Sabha and senior Congress leader Mallikarjun Kharge tested positive for COVID-19 on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X