ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಜನ್ಮಭೂಮಿ ವಿವಾದ: ಮಧ್ಯಸ್ಥಿಕೆ ಸಂಧಾನ ಸಾಧ್ಯವಾಗಿಲ್ಲವೇಕೆ?

|
Google Oneindia Kannada News

ನವದೆಹಲಿ, ಜುಲೈ 09: ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣದಲ್ಲಿ ಮಧ್ಯಸ್ಥಿಕೆ ಸಮಿತಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲ ಎಂದು ಸುಪ್ರೀಂಕೋರ್ಟಿಗೆ ಅರ್ಜಿದಾರರು ಹೇಳಿದ್ದಾರೆ.

ಈ ಪ್ರಕರಣವನ್ನು ಮಾತುಕತೆಯ ಮೂಲಕ ಆಗಸ್ಟ್ 15ರೊಳಗೆ ಪರಿಹಾರ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್ ನ್ಯಾಯಪೀಠವು ಮಧ್ಯಸ್ಥಿಕೆ ಸಂಧಾನಕಾರರಿಗೆ ಸೂಚಿಸಲಾಗಿತ್ತು.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್ 25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಸಂಧಾನ ಪ್ರಗತಿ ಬಗ್ಗೆ ತಿಳಿಸಲು ಅರ್ಜಿದಾರರಿಗೆ ಸೂಚಿಸಿತ್ತು.

Ram Janmabhoomi: Unhappy with progress during mediation, plaintiff tells SC

ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ಸಂಧಾನ ಪ್ರಕ್ರಿಯೆಯನ್ನು 4 ವಾರದೊಳಗೆ ಆರಂಭಿಸಿ, 8 ತಿಂಗಳೊಳಗೆ ಮುಗಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ, ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ ಆಗಸ್ಟ್ 15ರ ತನಕ ಅವಕಾಶ ನೀಡಲಾಗಿದೆ.

'ಮಂದಿರ, ಮಸೀದಿ ಇತಿಹಾಸ ಬದಲಾಯಿಸಲು ಆಗಲ್ಲ, ಈಗಿನ ವಿವಾದ ಮುಖ್ಯ' 'ಮಂದಿರ, ಮಸೀದಿ ಇತಿಹಾಸ ಬದಲಾಯಿಸಲು ಆಗಲ್ಲ, ಈಗಿನ ವಿವಾದ ಮುಖ್ಯ'

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಸುಪ್ರೀಂ ನೇಮಿಸಿರುವ ಮೂವರು ಸಂಧಾನಕಾರರು ಯಾರು? ಸುಪ್ರೀಂ ನೇಮಿಸಿರುವ ಮೂವರು ಸಂಧಾನಕಾರರು ಯಾರು?

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿದೆ.

English summary
The Supreme Court was told that there has not been much progress made in the the Ram Janmabhoomi case. The petitioner told the court that not much progress has been made even after the first round of mediation. The court was also urged to list the matter at the earliest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X