ರಾಷ್ಟ್ರಪತಿಯಾಗಿ ಇಂದು ರಾಮನಾಥ್ ಕೋವಿಂದ್ ಪ್ರಮಾಣ ವಚನ
ನವದೆಹಲಿ, ಜುಲೈ 25: ಭಾರತದ 14 ನೇ ರಾಷ್ಟ್ರಪತಿಯಾಗಿ ಎನ್ ಡಿಎಯ ರಾಮನಾಥ್ ಕೋವಿಂದ್ ಇಂದು(ಜುಲೈ 25) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪಾರ್ಲಿಮೆಂಟಿನ ಸೆಂಟ್ರಲ್ ಹಾಲ್ ನಲ್ಲಿ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಪ್ರಮಾಣ ವಚನ ಬೋಧಿಸಲಿದ್ದಾರೆ.

ಜುಲೈ 17 ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ರಾಮನಾಥ್ ಕೋವಿಂದ್ ಎದುರಿಸಿದ್ದರು. ಜುಲೈ 20 ರಂದು ನಡೆದ ಮತ ಎಣಿಕೆಯಲ್ಲಿ ಶೇ.65 ರಷ್ಟು ಮತ ಪಡೆಯುವ ಮೂಲಕ ಜಯ ದಾಖಲಿಸಿ, ಇದೀಗ ಭಾರತದ 14ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಹಮಿದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕೆಲವು ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಕೇಂದ್ರ ಸಚಿವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.












Click it and Unblock the Notifications