ಸಚಿವ ರಾಮ್ ವಿಲಾಸ್ ಪಾಸ್ವಾನ್‌ಗೆ ಕಿಡ್ನಿ ವೈಫಲ್ಯ ಆಸ್ಪತ್ರೆಗೆ ದಾಖಲು
ನವದೆಹಲಿ, ಆಗಸ್ಟ್ 24:ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್‌ಗೆ ಶ್ವಾಸಕೋಶ ಹಾಗೂ ಮೂತ್ರಪಿಂಡದ ಸಮಸ್ಯೆ ಕಾಣಿಸಿಕೊಂಡಿದ್ದು ದೆಹಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಭಾನುವಾರವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಶ್ವಾಸಕೋಶ ತೊಂದರೆಯ ಜೊತೆಗೆ ಕಿಡ್ನಿ ಸಮಸ್ಯೆಯೂ ಇರುವುದರಿಂದ ಪಾಸ್ವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 2017ರಲ್ಲಿ ಲಂಡನ್ನಲ್ಲಿ ಆಪರೇಷನ್ ಮಾಡಲಾಗಿತ್ತು. ನಿನ್ನೆ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೂ ಮೊದಲು ಅವರು ಆ್ಯಂಜಿಯೋಪ್ಲಾಸ್ಟಿಗೆ ಕೂಡ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಪಾಸ್ವಾನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರಿಗೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ.












Click it and Unblock the Notifications