ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ರಾಮ್‌ ವಿಲಾಸ್ ಪಾಸ್ವಾನ್‌ಗೆ ಕಿಡ್ನಿ ವೈಫಲ್ಯ ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಆಗಸ್ಟ್ 24:ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್‌ಗೆ ಶ್ವಾಸಕೋಶ ಹಾಗೂ ಮೂತ್ರಪಿಂಡದ ಸಮಸ್ಯೆ ಕಾಣಿಸಿಕೊಂಡಿದ್ದು ದೆಹಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಭಾನುವಾರವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೊರೊನಾ ಸೋಂಕುಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಕೊರೊನಾ ಸೋಂಕು

ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಶ್ವಾಸಕೋಶ ತೊಂದರೆಯ ಜೊತೆಗೆ ಕಿಡ್ನಿ ಸಮಸ್ಯೆಯೂ ಇರುವುದರಿಂದ ಪಾಸ್ವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Ram Vilas Paswan Admitted To Delhi Hospital Due To Lungs, Kidney Condition

ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 2017ರಲ್ಲಿ ಲಂಡನ್​ನಲ್ಲಿ ಆಪರೇಷನ್​ ಮಾಡಲಾಗಿತ್ತು. ನಿನ್ನೆ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೂ ಮೊದಲು ಅವರು ಆ್ಯಂಜಿಯೋಪ್ಲಾಸ್ಟಿಗೆ ಕೂಡ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಪಾಸ್ವಾನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರಿಗೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ.

English summary
Minister of Consumer Affairs, Food and Public Distribution Ram Vilas Paswan was admitted to Fortis Escorts Heart Institute on Sunday with congestion in lungs and acute kidney failure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X