• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹರ್ ಸಿಮ್ರತ್ ಕೌರ್, ರಂದೀಪ್ ಸರ್ಜೇವಾಲರಿಗೆ ಕೊರೊನಾ ಪಾಸಿಟಿವ್!

|

ನವದೆಹಲಿ, ಏಪ್ರಿಲ್ 16: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಹರಡುವಿಕೆ ವೇಗ ಹೆಚ್ಚುತ್ತಿದೆ. ಕಾಂಗ್ರೆಸ್ ಹಿರಿಯ ಮುಖಂಡ ರಂದೀಪ್ ಸಿಂಗ್ ಸರ್ಜೇವಾಲ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡರಾದ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

"ಇಂದು ಮುಂಜಾನೆ ನನ್ನ ಕೊರೊನಾವೈರಸ್ ಸೋಂಕಿನ ತಪಾಸಣೆ ವರದಿಯು ಪಾಸಿಟಿವ್ ಎಂದು ಬಂದಿದೆ. ಕಳೆದ ಐದು ದಿನಗಳಿಂದ ನನ್ನ ಜೊತೆಗೆ ಸಂಪರ್ಕ ಹೊಂದಿರುವವರು ಸ್ವಯಂಪ್ರೇರಿತರಾಗಿ ಸೋಂಕಿತ ತಪಾಸಣೆ ಮಾಡಿಸಿಕೊಳ್ಳಬೇಕು. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ರಂದೀಪ್ ಸಿಂಗ್ ಸರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಹಾಗೂ ಶಿರೋಮಣಿ ಅಕಾಲಿ ದಳ ಮುಖಂಡರಾದ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೂ ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. "ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ. ಪ್ರಸ್ತುತ ನಾನು ಗೃಹ ದಿಗ್ಬಂಧನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಹರ್ ಸಿಮ್ರತ್ ಕೌರ್ ಮನವಿ:

ಇತ್ತೀಚಿನ ದಿನಗಳಲ್ಲಿ ನನ್ನ ಜೊತೆ ಸಂಪರ್ಕಕ್ಕೆ ಬಂದಿರುವವರು ಸ್ವಯಂಪ್ರೇರಿತರಾಗಿ ಐಸೋಲೇಟ್ ಆಗಬೇಕು. ಅಗತ್ಯ ಮುನ್ನಚ್ಚರಿಕೆ ಕ್ರಮಗಳ ಜೊತೆಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅಕಾಲಿ ದಳ ಮುಖಂಡರಾದ ಹರ್ ಸಿಮ್ರತ್ ಕೌರ್ ಬಾದಲ್ ಮನವಿ ಮಾಡಿದ್ದಾರೆ.

English summary
Congress leader Randeep Surjewala And SAD Leader Harsimrat Kaur Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X