ಹೆಚ್ಚಿದ ಅತ್ಯಾಚಾರ ಪ್ರಕರಣ: ಮೋದಿ ಆಡಳಿತದ ವಿರುದ್ಧ ರಾಹುಲ್ ಕಿಡಿ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 16: ಕತುವಾ ಮತ್ತು ಉನ್ನಾವೋದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳು ಇಡೀ ದೇಶವನ್ನೂ ತಲ್ಲಣಿಸಿದೆ. ಈ ಪ್ರಕರಣಗಳನ್ನಿಟ್ಟುಕೊಂಡು ದೇಶದಲ್ಲಿ ಮಹಿಳೆಯರಿಗೆ ಭದ್ರತೆಯಿಲ್ಲ ಎಂದು ದೂರುತ್ತಿವೆ.

ಕತುವಾ, ಉನ್ನಾವೋ ಅತ್ಯಾಚಾರದ ಬಗ್ಗೆ ಮೌನ ಮುರಿದ ಮೋದಿ

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, "2016ರ ಇಸವಿಯಿಂದೀಚೆಗೆ ಭಾರತದಲ್ಲಿ ಅಪ್ರಾಪ್ತೆಯರ ಮೇಲಿನ ಅತ್ಯಾಚಾರದ 19,675 ಪ್ರಕರಣಗಳು ದಾಖಲಾಗಿವೆ. ಇದು ನಿಜಕ್ಕೂ ನಾಚಿಕೆಗೇಡು. ಭಾರತೀಯ ಹೆಣ್ಣುಮಕ್ಕಳ ಬಗ್ಗೆ ಪ್ರಧಾನಿ ಮೋದಿಯವರಿಗೆ ನಿಜಕ್ಕೂ ಕಾಳಜಿ ಇದ್ದಿದ್ದೇ ಆದರೆ ಈ ಎಲ್ಲಾ ಪ್ರಕರಣಗಳನ್ನೂ ತ್ವರಿತ ನ್ಯಾಯಾಲಯಕ್ಕೆ ವಹಿಸಿ ಪ್ರಕರಣ ಇತ್ಯರ್ಥಗೊಳಿಸಬೇಕು" ಎಂದಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಕಳೆದ ವಾರವಷ್ಟೇ ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದ ರಾಹುಲ್ ಗಾಂಧಿ, 'ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರಧಾನಿ ಮೋದಿಯವರ ಮೌನ ಪ್ರತಿಕ್ರಿಯೆ ಸ್ವೀಕಾರಾರ್ಹವಲ್ಲ. ಅತ್ಯಾಚಾರಿ ಮತ್ತು ಕೊಲೆಗಾರರನ್ನು ರಕ್ಷಿಸಲಾಗುತ್ತಿದೆ' ಎಂದು ಆರೋಪಿಸಿದ್ದರು. ಉನ್ನಾವೋ ಮತ್ತು ಕತುವಾದಲ್ಲಿ ಸಂಭವಿಸಿದ ಅತ್ಯಅಚಾರ ಪ್ರಕರಣಗಳ ವಿರುದ್ಧ ಏಪ್ರಿಲ್ 12 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ಇಂಡಿಯಾ ಗೇಟ್ ಬಳಿ ಕಾಂಗ್ರೆಸ್ ಮಧ್ಯರಾತ್ರಿ ಪ್ರತಿಭಟನೆ ನಡೆಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
"There were 19,675 rapes of minor children reported in 2016. This is shameful", tweets Rahul Gandhi. And asks Narendra Modi to seek 'justice for our daughters'

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ