Breaking: 'ರಾಷ್ಟ್ರಪತ್ನಿ' ವಿವಾದ; ಕ್ಷಮೆ ಕೇಳುವುದಿಲ್ಲವೆಂದ ಸಂಸದ

ನವದೆಹಲಿ, ಜುಲೈ 28: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರ 'ರಾಷ್ಟ್ರಪತ್ನಿ' ಹೇಳಿಕೆಯ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದ್ದು, ಕ್ಷಮೆಗೆ ಪಟ್ಟು ಹಿಡಿದಿದೆ. ಈ ವೇಳೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ನಾನು ತಪ್ಪಾಗಿ 'ರಾಷ್ಟ್ರಪತ್ನಿ' ಎಂದು ಹೇಳಿದ್ದೇನೆ ಎಂದು ಅಧೀರ್ ರಂಜನ್ ಚೌಧುರಿ ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಅಧೀರ್ ಚೌಧರಿ ಈ ಹೇಳಿಕೆ ನೀಡಿದ್ದರು.

ಹೇಳಿಕೆಗೆ ಕಿಡಿ ಕಾರಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಸೇರಿದಂತೆ ಬಿಜೆಪಿ ಸಂಸದರು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

'ಈ ಹೇಳಿಕೆ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಅವಮಾನಿಸುತ್ತದೆ ಎಂದು ತಿಳಿದಿದ್ದರು ಎಆರ್ ಚೌಧರಿ ಅವರು ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಸಂಬೋಧಿಸಿದ್ದಾರೆ. ಕಾಂಗ್ರೆಸ್ ಬುಡಕಟ್ಟು ವಿರೋಧಿ, ದಲಿತ ಮತ್ತು ಮಹಿಳಾ ವಿರೋಧಿ ಎಂದು ದೇಶಕ್ಕೆ ತಿಳಿದಿದೆ' ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು.

Rashtrapatni remark: There is no question of apologising- Congress MP

ಹೇಳಿಕೆ ಹಿನ್ನೆಲೆ ಸಂಸತ್ತಿನಲ್ಲಿ ಮತ್ತು ದೇಶದ ಬೀದಿಗಳಲ್ಲಿ ಕಾಂಗ್ರೆಸ್ ಕ್ಷಮೆಯಾಚಿಸುವ ಅಗತ್ಯವಿದೆ ಎಂದಿರುವ ಸ್ಮೃತಿ ಇರಾನಿ, ಮಹಿಳೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಸಾಂವಿಧಾನಿಕ ಹುದ್ದೆಗಳಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದ್ದಾರೆ ಎಂದರು.

"ಇದು ಉದ್ದೇಶಪೂರ್ವಕ ಅವಮಾನವಾಗಿತ್ತು. ಕಾಂಗ್ರೆಸ್ ಸಂಸದ ಅಧೀರ್ ಚೌಧರಿ ಅವರ 'ರಾಷ್ಟ್ರಪತ್ನಿ' ಹೇಳಿಕೆಗೆ ಸೋನಿಯಾ ಗಾಂಧಿ ಭಾರತ ಮತ್ತು ದೇಶದ ರಾಷ್ಟ್ರಪತಿಗಳಲ್ಲಿ ಕ್ಷಮೆಯಾಚಿಸಬೇಕು' ಎಂದು ಹಣಕಾಸು ಸಚಿವೆ ಮತ್ತು ಬಿಜೆಪಿ ನಾಯಕಿ ನಿರ್ಮಲಾ ಸೀತಾರಾಮನ್ ಒತ್ತಯಿಸಿದರು.

Rashtrapatni remark: There is no question of apologising- Congress MP

ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಅಧೀರ್ ರಂಜನ್ ಚೌಧುರಿ, "ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನಾನು ತಪ್ಪಾಗಿ 'ರಾಷ್ಟ್ರಪತ್ನಿ' ಎಂದು ಹೇಳಿದ್ದೇನೆ. ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಚಿಕ್ಕ ವಿಷಯವನ್ನು ದೊಡದ್ದು ಮಾಡಲು ಪ್ರಯತ್ನಿಸುತ್ತಿದೆ" ಎಂದಿರು.

Recommended Video

      ಪ್ರಧಾನಿ ರೇಸ್ ನಲ್ಲಿರೋ ರಿಶಿ ಸುನಕ್ ಪ್ರಜ್ಞೆ ತಪ್ಪಿದ ಟಿವಿ ಆ್ಯಂಕರ್ ಗೆ ಹೆಲ್ಪ್ ಮಾಡಿದ ವಿಡಿಯೋ |OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+