ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಆರೋಗ್ಯ ಸ್ಥಿರ
ನವದೆಹಲಿ, ಜನವರಿ 17: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ. ತೀವ್ರ ಅನಾರೋಗ್ಯದಿಂದಾಗಿ ರವಿಶಂಕರ್ ಪ್ರಸಾದ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ರವಿಶಂಕರ್ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಇರಿಸಲಾಗಿದೆ. ಹಾಗೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಂದಿ ಜ್ವರದಿಂದ ಬಳಲುತ್ತಿದ್ದು ಅವರು ಕೂಡ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕಿಡ್ನಿ ಕಸಿಯ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಕ್ಕೆ ತೆರಳಿದ್ದಾರೆ. ಈ ಬೆಳವಣಿಗೆಗಳ ಮಧ್ಯೆಯೇ ಬುಧವಾರ ಸಂಜೆ ವೇಳೆಗೆ ಅಮಿತ್ ಅವರು ಏಮ್ಸ್ಗೆ ದಾಖಲಾಗಿದ್ದಾರೆ. ಈ ವಿಚಾರವನ್ನು ಖುದ್ದು ಅಮಿತ್ ಷಾ ಬಹಿರಂಗಪಡಿಸಿದ್ದಾರೆ.

ಚಿಕಿತ್ಸೆ ನಡೆಯುತ್ತಿದೆ. ದೇವರು ಹಾಗೂ ಜನರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದರಿಂದ ಜ.20ರಿಂದ ನಡೆಯಬೇಕಿದ್ದ ಪಶ್ಚಿಮಬಂಗಾಳ ಸರಣಿ ಸಾರ್ವಜನಿಕ ಸಭೆ ಮತ್ತೆ ಮುಂದೆ ಹೋಗುವ ಸಾಧ್ಯತೆಯಿದೆ. ಹಾಲಿ ವೇಳಾಪಟ್ಟಿ ಪ್ರಕಾರ ಈ ಸಭೆಯನ್ನು ಅಮಿತ್ ಉದ್ಘಾಟಿಸಬೇಕಿತ್ತು.











Click it and Unblock the Notifications