• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ರಿಗೆ ಕೊರೊನಾವೈರಸ್ ಸೋಂಕು

|

ನವದೆಹಲಿ, ಅಕ್ಟೋಬರ್.25: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಯಾವುದೇ ಸೋಂಕಿತ ಲಕ್ಷಣಗಳು ಕಂಡು ಬಾರದಿದ್ದರೂ ಕೊವಿಡ್-19 ತಗುಲಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.

ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಶಕ್ತಿಕಾಂತ್ ದಾಸ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ನನಗೆ ಕೊವಿಡ್-19 ಸೋಂಕು ತಗುಲಿದ್ದು, ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ನಾನು ಆರೋಗ್ಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕೊವಿಡ್ 19: ಭಾರತದಲ್ಲಿ ಗುಣಮುಖರಾದವರ ಸಂಖ್ಯೆ 7,078,123

ಐಸೋಲೇಷನ್ ನಲ್ಲಿ ಇದ್ದುಕೊಂಡೇ ನಾನು ಪ್ರತಿದಿನ ಕಾರ್ಯ ನಿರ್ವಹಿಸುವುದಕ್ಕೆ ಶಕ್ತನಾಗಿದ್ದೇನೆ. ಆರ್ ಬಿಐಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಎಂದಿನಂತೆ ನಡೆದುಕೊಂಡು ಹೋಗುತ್ತವೆ. ಅದರಲ್ಲಿ ಯಾವುದೇ ರೀತಿ ವ್ಯತ್ಯಾಸ ಆಗುವುದಿಲ್ಲ. ಪ್ರತಿನಿತ್ಯ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿ ಇರುತ್ತೇನೆ ಎಂದು ಶಕ್ತಿಕಾಂತ್ ದಾಸ್ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್:

   Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

   ಭಾರತದಲ್ಲಿ ಒಂದೇ ದಿನ 50,129 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 78,64,811ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ 578 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 1,18,534ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 70,78,123 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ 6,68,154 ಸಕ್ರಿಯ ಪ್ರಕರಣಗಳಿವೆ.

   English summary
   RBI Governor Shaktikanta Das Tests Positive For Covid-19. Know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X