Get Updates
Get notified of breaking news, exclusive insights, and must-see stories!

ಎಎಪಿ ತೊರೆದ ಅಲ್ಕಾ ಲಂಬಾ, ಶಾಸಕ ಸ್ಥಾನದಿಂದಲೂ ಅನರ್ಹ

ನವದೆಹಲಿ, ಸೆ. 19: ಆಮ್ ಆದ್ಮಿ ಪಕ್ಷ ತೊರೆದಿರುವ ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಶಾಸಕಿ ಅಲ್ಕಾ ಲಂಬಾ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೊಯೆಲ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಿದ್ದಾರೆ.

ಎಎಪಿ ಶಾಸಕಿಯಾಗಿದ್ದ ಅಲ್ಕಾ ಲಂಬಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರಿದ್ದಾರೆ, ಇವರ ವಿರುದ್ಧ ಕ್ರಮ ಜರುಗಿಸಿ' ಎಂದು ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಅವರ ಅರ್ಜಿಯ ಮೇರೆಗೆ ಅಲ್ಕಾ ಲಂಬಾ ವಿರುದ್ಧ ಕ್ರಮ ಜರುಗಿಸಲಾಗಿದೆ.ಅಲ್ಕಾ ಲಂಬಾ ಶಾಸಕ ಸ್ಥಾನದಿಂದ ಅನರ್ಹಗೊಂಡ ಬಳಿಕ ದೆಹಲಿಯ ಚಾಂದಿನಿ ಚೌಕ್ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ.

ಸಂವಿಧಾನದ 10ನೇ ಪರಿಚ್ಛೇದದ ಕಲಂ 2(1)ರ ಅನ್ವಯ ಅಲ್ಕಾ ಲಂಬಾರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಎಎಪಿಯಿಂದ ಹೊರ ನಡೆದಿರುವ ಕಪಿಲ್ ಮಿಶ್ರಾ, ಸಂದೀಪ್ ಕುಮಾರ್, ಅನಿಲ್ ಬಾಜ್ಪೇಯಿ, ದೇವೇಂದ ಶೇಹ್ರಾವತ್ ಅವರನ್ನು ಕೂಡಾ ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಅಲ್ಕಾ ವಿರುದ್ಧ ಸಮರ ಸಾರಿದ್ದ ಶಾಸಕ ಸೌರಭ್

ಅಲ್ಕಾ ವಿರುದ್ಧ ಸಮರ ಸಾರಿದ್ದ ಶಾಸಕ ಸೌರಭ್

ಕಳೆದ ಜುಲೈ ತಿಂಗಳು ಗ್ರೇಟರ್ ಕೈಲಾಶ್ ಕ್ಷೇತ್ರದ ಎಎಪಿ ಶಾಸಕ ಸೌರಭ್​ಭಾರದ್ವಾಜ್ ಜೊತೆ ಅಲ್ಕಾ ಲಂಬಾ ಟ್ವೀಟ್ ವಾರ್ ನಡೆಸಿದ್ದರು. ನಂತರ ಲಂಬಾ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಈ ಕುರಿತು ಮಾತನಾಡಿದ ಲಂಬಾ, "ಪಕ್ಷದ ನಾಯಕರು ಪದೇ ಪದೇ ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಏನೇ ಆಗಿದ್ದರೂ ಪಕ್ಷ ಮತ್ತು ನನ್ನ ನಡುವೆ ಆಗಿದೆ. ನನ್ನ ಕ್ಷೇತ್ರದ ಜನರ ಕೈಯನ್ನು ನಾನು ಬಿಡುವುದಿಲ್ಲ. ಅವರಿಂದ ಆಯ್ಕೆಯಾಗಿರುವ ನಾನು ಅವರ ಒಳಿತಿಗೆ ಪ್ರಾರ್ಥಿಸುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿಯತ್ತ ಮಾತ್ರ ನಾನು ಗಮನ ಹರಿಸುತ್ತೇನೆ" ಎಂದಿದ್ದರು.

ಕಾಂಗ್ರೆಸ್ಸಿನಿಂದ ಎಎಪಿ ಸೇರಿ ಮತ್ತೆ ಕಾಂಗ್ರೆಸ್ಸಿಗೆ

ಕಾಂಗ್ರೆಸ್ಸಿನಿಂದ ಎಎಪಿ ಸೇರಿ ಮತ್ತೆ ಕಾಂಗ್ರೆಸ್ಸಿಗೆ

ವಿದ್ಯಾರ್ಥಿ ಸಂಘಟನೆ ನಾಯಕಿಯಾಗಿ 90ರ ದಶಕದಲ್ಲಿ ಬೆಳೆದ ಲಂಬಾ ಅವರು 1995ರಲ್ಲಿ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆಯಾಗಿದ್ದರು. ಕಾಂಗ್ರೆಸ್ಸಿನ ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯುಐನ ಸಕ್ರಿಯ ಸದಸ್ಯರಾಗಿದ್ದ ಲಂಬಾ ಅವರು 2002ರಲ್ಲಿ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ, ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಿಂದ 2015ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. "2013ರಿಂದ 2020 ರ ತನಕ ನನ್ನ ಪಯಣ ಆಶಾದಾಯಕವಾಗಿತ್ತು. ಎಲ್ಲಾ ಕ್ರಾಂತಿಕಾರಿ ಸಂಗಾತಿಗಳಿಗೆ ನನ್ನ ಅಭಿನಂದನೆಗಳು" ಎಂದಿದ್ದರು. ಈಗ ಮರಳಿ ಕಾಂಗ್ರೆಸ್ ಸೇರಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೈ ಮೈತ್ರಿ ಇರಲಿಲ್ಲ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೈ ಮೈತ್ರಿ ಇರಲಿಲ್ಲ

"ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಏಕೆ ಸಾಧ್ಯವಾಗಲಿಲ್ಲ ದೆಹಲಿಯಲ್ಲದೆ, ಹರ್ಯಾಣ, ಪಂಜಾಬ್ ನಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಇನ್ನಿಲ್ಲದ್ದಂತೆ ಕಾಡಿ ಬೇಡಿದ ಎಎಪಿಯ ಹುಳುಕು ಎಲ್ಲರಿಗೂ ಗೊತ್ತಾಗಿದೆ, ದೆಹಲಿಯಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಏಕೆ ಸಾಧ್ಯವಾಗಲಿಲ್ಲ ಎಂಬುದು ಬಹಿರಂಗವಾಗಲಿ" ಎಂದು ಅಲ್ಕಾ ಆಗ್ರಹಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಎಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲು ಅಲ್ಕಾ ನಿರಾಕರಿಸಿದ್ದರು.

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದ ಲಂಬಾ

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದ ಲಂಬಾ

2013ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಲಂಬಾ, ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ, ಸ್ಥಳೀಯವಾಗಿ ಜನಪ್ರಿಯತೆ ಉಳಿಸಿಕೊಂಡಿದ್ದಾರೆ. ಆದರೆ, ಶೀಲಾ ದೀಕ್ಷಿತ್ ಅವರು ಹಿಂತಿರುಗಿದ ಬಳಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎಎಪಿ ಮೈತ್ರಿ ಅಸಾಧ್ಯವಾಯಿತು. ಲೋಕಸಭೆ ಚುನಾವಣೆ 2019ರಲ್ಲಿ 7ಕ್ಕೆ ಏಳು ಕ್ಷೇತ್ರಗಳಲ್ಲಿ ಕಳಪೆ ಸಾಧನೆ ಮಾಡಿದ ಎಎಪಿಯ ಸೋಲಿಗೆ ಯಾರು ಹೊಣೆ ಎಂದು ಅರವಿಂದ್ ಕೇಜ್ರಿವಾಲ್ ರನ್ನು ಅಲ್ಕಾ ಪ್ರಶ್ನಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+