ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಳಿ ಚಳಿ: ದೆಹಲಿಯಲ್ಲಿ 71 ವರ್ಷಗಳಲ್ಲೇ ಅತಿ ಕನಿಷ್ಠ ಉಷ್ಣಾಂಶ ದಾಖಲು

|
Google Oneindia Kannada News

ನವದೆಹಲಿ, ನವೆಂಬರ್ 30: ಕಳೆದ 71 ವರ್ಷಗಳಲ್ಲಿ ಕಂಡಿರದ ಚಳಿ ಈ ಬಾರಿ ದೆಹಲಿಯಲ್ಲಿ ದಾಖಲಾಗಿದೆ.

ಒಂದೆಡೆ ಕೊರೊನಾ ಅಬ್ಬರ, ಇನ್ನೊಂದೆಡೆ ಮಾಲಿನ್ಯ ಈಗ ಇದಕ್ಕೂ ಚಳಿ ಸೇರ್ಪಡೆಯಾಗಿದ್ದು, ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದೀಗ ಕನಿಷ್ಠ 6.9 ಡಿಗ್ರಿ ಉಷ್ಣಾಂಶ ದಾಖಲಾಗಿದೆ. 71 ವರ್ಷಗಳ ಹಿಂದೆ ಅಂದರೆ 1949ರಲ್ಲಿ 10.2 ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.1938ರಲ್ಲಿ 9.6 ಡಿಗ್ರಿ ಸೆಲ್ಸಿಯಸ್, 1931ರಲ್ಲಿ 9 ಡಿಗ್ರಿ ಸೆಲ್ಸಿಯಸ್, 1930ರಲ್ಲಿ 8.9 ಡಿಗ್ರಿ ಸೆಲ್ಸಿಯಸ್ ಇತ್ತು.

ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ 12.9 ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ. ಕಳೆದ ವರ್ಷ15 ಡಿಗ್ರಿ ಸೆಲ್ಸಿಯಸ್ ಇತ್ತು. 2018ರಲ್ಲಿ 13.4 ಡಿಗ್ರಿ ಸೆಲ್ಸಿಯಸ್, 2017ರಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಇತ್ತು.

ಮುಂದಿನ ಕೆಲವು ದಿನಗಳಲ್ಲಿ ಕನಿಷ್ಠ ಉಷ್ಣಾಂಶ 4.5 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೋಮವಾರ ದೆಹಲಿಯಲ್ಲಿ 6.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಎಂಟು ದಿನಗಳ ಹಿಂದೆ 10 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು.

ವಾಯುಭಾರ ಕುಸಿತ; 4 ದಿನ ಕರ್ನಾಟಕದಲ್ಲಿ ಮಳೆ ವಾಯುಭಾರ ಕುಸಿತ; 4 ದಿನ ಕರ್ನಾಟಕದಲ್ಲಿ ಮಳೆ

ನವೆಂಬರ್ 23ರಂದು 6.3 ಡಿಗ್ರಿ ಸೆಲ್ಸಿಯಸ್‌ ಇತ್ತು, 2003ರಿಂದ ಈವರೆಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿತ್ತು.ನಗರದಲ್ಲಿ 6.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.

ಮುಂದಿನ ಕೆಲವು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ. ಕಳೆದ 58 ವರ್ಷಗಳಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಅತಿ ಕಡಿಮೆ ಉಷ್ಣಾಂಶ ವಿತ್ತು.

ಕೊರೊನಾ ಸಮಯದಲ್ಲಿ ಚಳಿಯ ತೀವ್ರತೆ

ಕೊರೊನಾ ಸಮಯದಲ್ಲಿ ಚಳಿಯ ತೀವ್ರತೆ

ಕೊರೊನಾ ಸಮಯದಲ್ಲಿ ಈ ಚಳಿಯ ತೀವ್ರತೆ ಹಲವು ಅನಾರೋಗ್ಯ ಸಮಸ್ಯೆಗಳಿಗೂ ಎಡೆಮಾಡಿಕೊಡುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಹೃದಯ ಆರೋಗ್ಯದ ಬಗ್ಗೆ ಎಚ್ಚರ

ಹೃದಯ ಆರೋಗ್ಯದ ಬಗ್ಗೆ ಎಚ್ಚರ

ಚಳಿ ಹೆಚ್ಚಿದ್ದಾಗ ತೀವ್ರ ಚಳಿಯಿಂದ ಹೃದಯದ ಅಪಧಮನಿಗಳು ಪೆಡಸಾಗುತ್ತದೆ. ಆಗ ರಕ್ತದೊತ್ತಡ ಮತ್ತು ಪ್ರೋಟಿನ್ ಪ್ರಮಾಣ ಹೆಚ್ಚಾಗಿ ರಕ್ತ ಹೆಪ್ಪುಗಟ್ಟುತ್ತದೆ.ಇದರಿಂದ ಹೃದಯಾಘಾತದಂಥಾ ಸಮಸ್ಯೆಗಳು ಎದುರಾಗುತ್ತವೆ. ಅಸ್ತಮಾ ರೋಗಿಗಳಿಗೂ ತೊಂದರೆ ಹೆಚ್ಚು. ಹೀಗಾಗಿ ರೋಗನಿರೋಧಕ ಶಕ್ತಿ ಕಡಿಮೆ ಇರುವ 60ವರ್ಷ ಮೇಲ್ಪಟ್ಟವರು ಜತೆಗೆ ಆರು ವರ್ಷದ ಒಳಗಿನ ಮಕ್ಕಳು ವಿಶೇಷ ಕಾಳಜಿವಹಿಸಬೇಕು.

ಹೊರಗಿನ ತಿಂಡಿ ತಿನ್ನುವುದು ಕಡಿಮೆ ಮಾಡಿ

ಹೊರಗಿನ ತಿಂಡಿ ತಿನ್ನುವುದು ಕಡಿಮೆ ಮಾಡಿ

ಹೊರಗಿನ ತಿಂಡಿ, ತಿನಿಸು, ಎಣ್ಣೆ ಪದಾರ್ಥ ಹಾಗೂ ಮಾಂಸಾಹಾರ ಸೇವನೆ ಹೆಚ್ಚಾಗಿ ಮಾಡಬಾರದು. ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ತರಕಾರಿಗಳು , ಹಣ್ಣು ಕಾಳಿನ ಪದಾರ್ಥ ಸೇವಿಸಬೇಕು. ಬಿಸಿನೀರು ಕುಡಿಯುವುದನ್ನು ರೂಢಿಸಿಕೊಳ್ಳಬೇಕು.

ಬೆಳಗ್ಗೆ, ಸಂಜೆ ವಾಕಿಂಗ್ ಬೇಡ

ಬೆಳಗ್ಗೆ, ಸಂಜೆ ವಾಕಿಂಗ್ ಬೇಡ

ಚಳಿಯ ವೇಳೆ ಹೃದಯಾಘಾತ ಹೆಚ್ಚಾಗುವುದರಿಂದ ಬೆಚ್ಚನೆಯ ವಾತಾವರಣ ಸೃಷ್ಟಿಸಿಕೊಳ್ಳಬೇಕು, ಮುಂಜಾಗ್ರತೆ ದೃಷ್ಟಿಯಿಂದ ಬೆಳಗಿವ ವಾಕಿಂಗ್, ಸಂಜೆ ಆರು ಗಂಟೆ ಬಳಿಕ ಹೊರಹೋಗುವುದನ್ನು ಕಡಿಮೆ ಮಾಡಬೇಕು.

English summary
The month of November was the coldest in the national capital in 71 years, with the mean minimum temperature dropping to 10.2 degrees Celsius, according to the India Meteorological Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X