ದೆಹಲಿಯಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣ ಮತ್ತಷ್ಟು ಇಳಿಕೆ
ನವದೆಹಲಿ, ಮೇ 20: ದೇಶದ ರಾಜಧಾನಿ ದೆಹಲಿಯಲ್ಲಿ ಅಬ್ಬರಿಸಿದ್ದ ಕೊರೊನಾ ವೈರಸ್ ಈಗ ನಿಧಾನಕ್ಕೆ ಕಡಿಮೆಯಾಗುತ್ತಿದೆ. 3231 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏಪ್ರಿಲ್ 1ರ ನಂತರ ಅತ್ಯಂತ ಕನಿಷ್ಟ ಮಟ್ಟಕ್ಕೆ ಇಳಿಕೆಯಾಗಿದೆ.
ದೆಹಲಿಯಲ್ಲಿ ಪಾಸಿಟಿವಿಟಿ ಸಂಖ್ಯೆಯೂ ಕೂಡ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ ಶೇಕಡಾ 5.5ಕ್ಕೆ ಇಳಿಕೆಯಾಗಿದೆ. ಏಪ್ರಿಲ್ 6ರಂದು 4.93 ಶೇಕಡಾ ಪಾಸಿಟಿವಿಟಿ ದಾಖಲಾದ ನಂತರ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಏಪ್ರಿಲ್ 19ರಿಂದ ರಾಷ್ಟ್ರರಾಜಧಾನಿಯಲ್ಲಿ ಲಾಕ್‌ಡೌನ್ ಘೋಷಿಸಿದ ನಂತರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ನಿಯಂತ್ರಣ ಕಂಡುಬಂದಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏಪ್ರಿಲ್ 12ರ ನಂತರ ಕನಿಷ್ಟ ಮಟ್ಟಕ್ಕೆ ಇಳಿದಿದ್ದು ಸದ್ಯ ರಾಷ್ಟ್ರ ರಾಜಧಾನಿಯಲ್ಲಿ 40,214 ಕೊರೊನಾ ವೈರಸ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 233 ಸೋಂಕಿತರು ಕೊರೊನಾ ವೈರಸ್‌ಗೆ ಮೃತಪಟ್ಟಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಕೊರೊನಾ ವೈರಸ್‌ಗೆ ಮೃತಪಟ್ಟವರ ಸಂಖ್ಯೆ 22579ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಈ ಮಾರಕ ವೈರಸ್‌ನಿಂದ ಚೇತರಿಕೆ ಕಂಡವರ ಪ್ರಮಾಣದಲ್ಲಿಯೂ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 7831 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಗುಣಮುಖರಾದವರ ಒಟ್ಟು ಸಂಖ್ಯೆ 13,47,157 ಆಗಿದೆ. ಚೇತರಿಕೆ ಕಂಡವರ ಶೇಕಡಾವಾರು ಪ್ರಮಾಣ 95.5 ಆಗಿದೆ.
ದೆಹಲಿಯಲ್ಲಿ ಈವರೆಗೆ ಒಟ್ಟು 14,09,950 ಕೊರೊನಾ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಪಾಸಿಟಿವಿಟಿ ದರ ಶೇಕಡಾ 7.61 ಇದೆ. ವೈರಸ್‌ನಿಂದ ಮೃತಪಟ್ಟವರ ಒಟ್ಟು ಪ್ರಮಾಣ 1.60 ಶೇಕಡಾ ಆಗಿದೆ. ಕಳೆದ 24 ಗಂಟೆಯಲ್ಲಿ 68,703 ಜನರಿಗೆ ಲಸಿಕೆಯನ್ನು ಹಾಕಲಾಗಿದ್ದು ಇದರಲ್ಲಿ 61,576 ಜನ ಮೊದಲ ಡೋಸ್ ಪಡೆದವರಾಗಿದ್ದರೆ. 7127 ಜನ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.












Click it and Unblock the Notifications