70 ನೇ ಗಣರಾಜ್ಯೋತ್ಸವ: ದೆಹಲಿಯಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ
ನವದೆಹಲಿ, ಜನವರಿ 26: ನವದೆಹಲಿಯಲ್ಲಿ ನಡೆಯಲಿರುವ 70 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ರಾಜಧಾನಿ ದೆಹಲಿಯಾದ್ಯಂತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವುದರಿಂದ ಕೆಂಪು ಕೋಟೆಯ ಸುತ್ತ ಕಟ್ಟೆಚ್ಚರ ವಹಿಸಲಾಗಿದೆ.

25000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದ್ದು, 36 ಮಹಿಳಾ ಕಮಾಂಡೋಗಳನ್ನೂ ನೇಮಿಸಲಾಗಿದ್ದು, ಎಲ್ಲೆಡೆಯೂ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಡ್ರೋನ್ ಕ್ಯಾಮರಾಗಳು ಹಾರಾಟ ನಡೆಸುತ್ತಿದ್ದು, ಯಾವುದೇ ರೀತಿಯ ದಾಳಿ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಟ್ರಾಫಿಕ್ ಬದಲಾವಣೆಯ ಮೇಲುಸ್ತುವಾರಿಗಾಗಿಯೇ 3000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.












Click it and Unblock the Notifications