• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ: ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಪ್ರಧಾನಿ ಜೊತೆ ವಿದ್ಯಾರ್ಥಿಗಳು!

|
Google Oneindia Kannada News

ನವದೆಹಲಿ, ಜನವರಿ.24: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಭಾಗವಹಿಸಲು ಅವಕಾಶ ನೀಡುವುದಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಘೋಷಿಸಿದೆ.

ಕೇಂದ್ರದ ಸಿಬಿಎಸ್ ಸಿಯ 10ನೇ ತರಗತಿ, ಪಿಯುಸಿ, ಪದವಿ ಪೂರ್ವ ಮತ್ತು ಸ್ನಾತರೋತ್ತರ ಪದವಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳು 2021ನೇ ಸಾಲಿನ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತಿದೆ.

ಜ.26ರ ರೈತರ ಟ್ರಾಕ್ಟರ್ ಜಾಥಾಕ್ಕೆ ದೆಹಲಿ ಪೊಲೀಸರ ಅನುಮತಿಜ.26ರ ರೈತರ ಟ್ರಾಕ್ಟರ್ ಜಾಥಾಕ್ಕೆ ದೆಹಲಿ ಪೊಲೀಸರ ಅನುಮತಿ

ಜನವರಿ.26 ರಂದು ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯಲಿದ್ದು, 'ನಿಶಾಂಕ್' ಎಂಬ ವಿದ್ಯಾರ್ಥಿಗೆ ಮೆಚ್ಚುಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಇಳಿಕೆ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಈ ಬಾರಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆಯನ್ನು ತಗ್ಗಿಸಲಾಗಿದೆ. 600 ಸಾಂಸ್ಕೃತಿಕ ಕಾರ್ಯಕ್ರಮಗಳ ಬದಲಾಗಿ 401 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ದೆಹಲಿಯ ನಾಲ್ಕು ಶಾಲೆಗಳ 321 ವಿದ್ಯಾರ್ಥಿಗಳು, ಕೋಲ್ಕತ್ತಾ ಮೂಲದ 80 ಮಂದಿ ಜಾನಪದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯವು ತಿಳಿಸಿದೆ.

English summary
Republic Day 2021: University, CBSE Toppers Are Participate In Parade With Prime Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X