Get Updates
Get notified of breaking news, exclusive insights, and must-see stories!

ಈ ಬಾರಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳ ಪ್ರದರ್ಶನ

ದೆಹಲಿ, ಜನವರಿ,03: ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನದಲ್ಲೂ ರಾಜಕೀಯ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ವಿರೋಧ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳು ಸಲ್ಲಿಸಿದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ದ್ವೇಷದ ರಾಜಕಾರಣ ನಡೆಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಜನವರಿ.26ರಂದು ನಡೆಯುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ತಮ್ಮ ರಾಜ್ಯದ ಸ್ತಬ್ಧಚಿತ್ರಗಳ ಪ್ರದರ್ಶಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ ಕೇಂದ್ರ ಸರ್ಕಾರವು ಈಗಾಗಲೇ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರ ಹಾಗೂ ಕೇರಳ ರಾಜ್ಯಗಳು ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ.

ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳ ಪ್ರದರ್ಶನ

ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳ ಪ್ರದರ್ಶನ

ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು ಏಳು ದಶಕಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ 22 ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಕೈಗಾರಿಕೆ ಮತ್ತು ಆಂತರಿಕ ವ್ಯವಹಾರಗಳ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಣಕಾಸು ವ್ಯವಹಾರಗಳ ಇಲಾಖೆ, ಗೃಹ ಸಚಿವಾಲಯ, ವಸತಿ ಮತ್ತು ನಗರ ವ್ಯವಹಾರ ಸಚಿವಾಲಯ, ಎನ್ ಡಿಆರ್ಎಫ್, ಸಿಪಿಡಬ್ಲ್ಯುಡಿ ಸಲ್ಲಿಸಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಲಾಗಿದೆ.

32ರ ಪೈಕಿ 16 ರಾಜ್ಯಗಳ ಸ್ತಬ್ಧಚಿತ್ರ ಪ್ರದರ್ಶನ

32ರ ಪೈಕಿ 16 ರಾಜ್ಯಗಳ ಸ್ತಬ್ಧಚಿತ್ರ ಪ್ರದರ್ಶನ

ಕೇಂದ್ರ ಸರ್ಕಾರದ ಮುಂದೆ 32 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪೈಕಿ 6 ಇಲಾಖೆ ಹಾಗೂ 16 ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್ ಗಢ್, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಕರ್ನಾಟಕ, ಮಧ್ಯಪ್ರದೇಶ, ಮೇಘಾಲಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ರಾಜ್ಯಗಳ ಸ್ತಬ್ಧಚಿತ್ರ ಪ್ರದರ್ಶಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಕೇಂದ್ರ ಸರ್ಕಾರಕ್ಕೆ 56 ಸ್ತಬ್ಧಚಿತ್ರಗಳ ಬಗ್ಗೆ ಪ್ರಸ್ತಾವನೆ

ಕೇಂದ್ರ ಸರ್ಕಾರಕ್ಕೆ 56 ಸ್ತಬ್ಧಚಿತ್ರಗಳ ಬಗ್ಗೆ ಪ್ರಸ್ತಾವನೆ

ಈ ಬಾರಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 56 ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು. ಎಲ್ಲ ಸ್ತಬ್ಧಚಿತ್ರಗಳನ್ನು ಪರಾಮರ್ಶೆ ನಡೆಸಿದ ತಜ್ಞರ ಸಮಿತಿಯು 22 ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

ಬಿಜೆಪಿಯೇತರ ರಾಜ್ಯಗಳ ಪ್ರಸ್ತಾವನೆಗಿಲ್ಲ ಮನ್ನಣೆ

ಬಿಜೆಪಿಯೇತರ ರಾಜ್ಯಗಳ ಪ್ರಸ್ತಾವನೆಗಿಲ್ಲ ಮನ್ನಣೆ

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಕೇಂದ್ರ ಸರ್ಕಾರವು ರಾಜಕೀಯ ಪ್ರೇರಿತ ನಡೆಯನ್ನು ಅನುಸರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ. ಪೂರ್ವಾಗ್ರಹ ಪೀಡಿತರಾಗಿ ಕೇಂದ್ರ ಸರ್ಕಾರವು ತೀರ್ಮಾನ ಕೈಗೊಳ್ಳುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+