ಕೊರೊನಾ ಎಫೆಕ್ಟ್: ಮಾರ್ಚ್ 31ರವರೆಗೂ ದೇಶಾದ್ಯಂತ ರೆಸ್ಟೋರೆಂಟ್ ಬಂದ್
ದೆಹಲಿ, ಮಾರ್ಚ್ 18: ಜಾಗತಿಕ ಮಟ್ಟದಲ್ಲಿ ಆತಂಕ ಹುಟ್ಟಿಸಿರುವ ಕೊರೊನಾ ವೈರಸ್‌ಗೆ ಭಾರತ ದೇಶವೂ ಸಿಲುಕಿಕೊಂಡಿದೆ. ಕೊರೊನಾ ಹರಡುವಿಕೆ ತಡೆಯಲು ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅನೇಕ ರಾಜ್ಯಗಳು ಶಾಲೆ, ಕಾಲೇಜು, ಮಾಲ್, ಚಿತ್ರಮಂದಿರ, ಶಾಪಿಂಗ್ ಮಾಲ್, ಪಬ್, ಕ್ಲಬ್ ಎಲ್ಲವನ್ನು ಬಂದ್ ಮಾಡಿದೆ.
ಇದೀಗ, ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಶನ್ ಆಫ್ ಇಂಡಿಯಾ (NRAI) ದೇಶಾದ್ಯಂತ 5 ಲಕ್ಷಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳನ್ನು ಮಾರ್ಚ್ 31ರ ವರೆಗೂ ಮುಚ್ಚಲು ಸೂಚಿಸಿದೆ.
ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ರೆಸ್ಟೋರೆಂಟ್ ಮಾಲೀಕರು ಕೈಜೋಡಿಸಿದ್ದು, ರೆಸ್ಟೋರೆಂಟ್ ಅಸೋಸಿಯೇಶನ್ ಅಡಿಯಲ್ಲಿ ಬರುವ ಪಬ್, ಬಾರ್, ಕೆಫೆಗಳ ಕಾರ್ಯ ಸ್ಥಗಿತಗೊಳಿಸಲಿದೆ.

''ಬಹುತೇಕ ನಗರದ ರೆಸ್ಟೋರೆಂಟ್ ಮಾಲೀಕರು ಈ ಕುರಿತು ಒಮ್ಮತ ಸೂಚಿಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆಯೂ ಗಮನಹರಿಸಬೇಕಾಗಿದೆ. ರೆಸ್ಟೋರೆಂಟ್ ಮುಚ್ಚುವುದು ಸ್ವಯಂಪ್ರೇರಿತವಾಗಿರುತ್ತೆ, ಇಲ್ಲಿ ಒತ್ತಾಯವಿರುವುದಿಲ್ಲ'' ಎಂದು ರೆಸ್ಟೋರೆಂಟ್ ಅಸೋಸಿಯೇಶನ್ ಅಧ್ಯಕ್ಷ ಅನುರಾಗ್ ಕಟ್ರಿಯಾರ್ ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರತ್ತಲೇ ಇದೆ. ಇದುವರೆಗೂ ಸುಮಾರು 147ಕ್ಕೂ ಅಧಿಕ ಕೇಸ್‌ಗಳು ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟು ಮೂರು ಸಾವು ಸಂಭವಿಸಿದ್ದು, ಕಲುಬುರ್ಗಿ, ದೆಹಲಿ ಮತ್ತು ಮಹಾರಷ್ಟ್ರದಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ.
2018-19ರಲ್ಲಿ ಭಾರತೀಯ ರೆಸ್ಟೋರೆಂಟ್ ಉದ್ಯಮವು 7.3 ಮಿಲಿಯನ್ ಜನರಿಗೆ ಉದ್ಯೋಗ ನೀಡಿದೆ. 2022-23ರ ವೇಳೆಗೆ ಆಹಾರ ಸೇವೆಗಳ ಉದ್ಯಮವು 4.2 ಲಕ್ಷ ಕೋಟಿ ತೆರಿಗೆ ಮತ್ತು ಶೇಕಡಾ 9 ರಷ್ಟು ಬೆಳವಣಿಗೆಯಾಗುವ ಮುನ್ಸೂಚನೆ ಇದೆ. ಈ ನಿಟ್ಟಿನಲ್ಲಿ ಕೊರೊನಾ ವೈರಸ್ ಸೋಂಕು ರೆಸ್ಟೋರೆಂಟ್ ಉದ್ಯಮದ ಲೆಕ್ಕಾಚಾರದ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications