ಸುಪ್ರೀಂಕೋರ್ಟ್‌ನಲ್ಲಿ ಇಂದು ಮತ್ತೆ ಅಯೋಧ್ಯೆ ವಿಚಾರಣೆ
ನವದೆಹಲಿ, ಡಿಸೆಂಬರ್ 12: ಅಯೋಧ್ಯಾ ರಾಮಜನ್ಮಭೂಮಿ ಪ್ರಕರಣದ ಸುಪ್ರೀಂಕೋರ್ಟ್ ಆದೇಶ ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರ ನೇತೃತ್ವದಲ್ಲಿ ಇನ್‌ಛೇಂಬರ್(ನ್ಯಾಯಮೂರ್ತಿಗ ಕಚೇರಿ ಒಳಗೆ) ವಿಚಾರಣೆ ನಡೆಯಲಿದೆ.
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಇತರರು ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದು, ಸುಪ್ರೀಂಕೋರ್ಟ್ ಸಂವಿಧಾನಪೀಠದ ಸರ್ವಾನುಮತದ ಆದೇಶವು ಅಸಮರ್ಪಕವಾಗಿದೆ.

ಮುಸ್ಲಿಮರ ಭಾವನೆ ಹಾಗೂ ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಮರುಪರಿಶೀಲನೆ ಮಾಡಬೇಕು ಎಂದು ಅರ್ಜಿದಾರರು ಹೇಳಿದ್ದರು.
ಆದರೆ ಪ್ರಮುಖ ಅರ್ಜಿದಾರರಾಗಿರುವ ಸುನ್ನಿ ವಕ್ಫ್ ಮಂಡಳಿ ಮರು ಪರಿಶೀಲನಾ ಅರ್ಜಿ ಸಲ್ಲಿಸದೆ, ವಿವಾದದಲ್ಲಿ ಕೋರ್ಟ್ ನೇರವಾಗಿ ಪರಿಗಣಿಸದ ವ್ಯಕ್ತಿಗಳು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಮೇಲೆ ಕುತೂಹಲ ಮೂಡಿದೆ.
ಏತನ್ಮಧ್ಯೆ ಕೆಲ ಹಿಂದೂ ಸಂಘಟನೆಗಳು ಕೂಡ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿವೆ.ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಭೂಮಿ ನೀಡುವುದನ್ನು ಇದು ವಿರೋಧಿಸಿದೆ.
ಕಳೆದ ನವೆಂಬರ್ 9ರಂದು ಸುಪ್ರೀಂಕೋರ್ಟ್‌ನ ಸಂವಿಧಾನ ಪೀಠವು ಈ ವಿವಾದಕ್ಕೆ ಸಂಬಂಧಿಸಿ ಮಹತ್ವದ ತೀರ್ಪು ನೀಡಿತ್ತು.
ಆ ಪ್ರಕಾರ ಹಿಂದೂ ಸಂಘಟನೆಗೆ ಟ್ರಸ್ಟ್ ಮೂಲಕ ಎಲ್ಲಾ ವಿವಾದಿತ ಜಾಗವನ್ನು ನೀಡಿದ್ದರೆ, ಸುನ್ನಿ ವಕ್ಫ್ ಮಂಡಳಿಗೆ ಅಯೋಧ್ಯೆಯಲ್ಲಿ ಐದು ಎಕರೆ ಭೂಮಿ ನೀಡಲು ಸರ್ಕಾರಕ್ಕೆ ಸೂಚಿಸಿತ್ತು.
ಅಯೋಧ್ಯೆ ವಿವಾದಿತ ಭೂಮಿಯ ಮೇಲೆ ಮುಸ್ಲಿಂ ಅರ್ಜಿದಾರರಿಗೆ ಯಾವುದೇ ಅಧಿಕಾರವಿಲ್ಲ, ವಿವಾದಿತ ಭೂಮಿಯು ಮುಸ್ಲಿಮರಿಗೆ ಸೇರಿದೆ ಎನ್ನುವುದಕ್ಕೂ ದಾಖಲೆಗಳಿಲ್ಲ.
ಈ ಪ್ರಕರಣವನ್ನು ಧಾರ್ಮಿಕ ನಂಬಿಕೆ ಆಧಾರದ ಮೇಲೆ ನಿರ್ಧರಿಸಲೂ ಸಾಧ್ಯವಿಲ್ಲ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಹಿಂದೂಗಳಿಗೆ ನೀಡಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications