ದೆಹಲಿ ಗಲಭೆ: ಆಸೀಫ್, ಕಲಿತಾ, ನತಾಶಾ ತಿಹಾರ್ ಜೈಲಿನಿಂದ ಬಿಡುಗಡೆ
ನವದೆಹಲಿ, ಜೂ. 17: ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆಯರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾಗೆ ಜಾಮೀನು ಲಭಿಸಿದ ಎರಡು ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ ವರ್ಷ (2020) ಮೇ ತಿಂಗಳಲ್ಲಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಈ ಮೂವರು ಬಂಧನಕ್ಕೆ ಒಳಗಾಗಿದ್ದು ದೆಹಲಿ ಹೈಕೋರ್ಟ್ ಮೂವರಿಗೂ 2021ರ ಜೂನ್ 15ರಂದು ಜಾಮೀನು ನೀಡಿದೆ.
ಆದರೆ ಪೊಲೀಸರು ವಿಳಾಸ ಮತ್ತು ಶ್ಯೂರಿಟಿ ಪರಿಶೀಲನೆ ಮಾಡಬೇಕಾದ ಹಿನ್ನೆಲೆ ಮೂವರನ್ನು ತಕ್ಷಣ ಬಿಡುಗಡೆ ಮಾಡಲು ಕಡಕಡ್‌ಡೂಮಾ ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು. ತನಿಖಾಧಿಕಾರಿ ಬುಧವಾರ ಹೆಚ್ಚಿನ ಸಮಯಾವಕಾಶ ಕೋರಿದ್ದರು. ಈ ಕಾರಣದಿಂದಾಗಿ ಬುಧವಾರವೂ ಈ ಮೂವರು ಬಿಡುಗಡೆಯಾಗಿರಲಿಲ್ಲ.

ಈ ನಡುವೆ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತನ್ಹಾಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ, ದೆಹಲಿ ಹೈಕೋರ್ಟ್ ಆದೇಶದಂತೆ ಜೈಲಿನಿಂದ ಶೀಘ್ರ ಬಿಡುಗಡೆಯಾಗಬೇಕೆಂದು ಮೂವರು ವಿದ್ಯಾರ್ಥಿಗಳು ಮೇಲ್ಮನವಿ ಸಲ್ಲಿಸಿದ್ದು ಈ ತುರ್ತು ಮೇಲ್ಮನವಿಯನ್ನು ಗುರುವಾರ ಆಲಿಸಲಾಗಿದೆ.
ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಕಡಕಡ್‌ಡೂಮಾ ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಕದ ತಟ್ಟಿದ್ದರು. ''ಹೈಕೋರ್ಟ್ ಜಾಮೀನು ನೀಡಿದ ನಂತರವೂ ಸರ್ಕಾರವು ಬಿಡುಗಡೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ,'' ಎಂದು ಆರೋಪಿಸಿದ್ದರು.
ಈ ಹಿನ್ನೆಲೆ ದೆಹಲಿ ಹೈಕೋರ್ಟ್, ''ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸಬೇಕು. ಆ ಬಳಿಕ ಹೈಕೋರ್ಟ್ ಮಧ್ಯಾಹ್ನ 3.30 ಕ್ಕೆ ವಿಚಾರಣೆ ನಡೆಸಲಿದೆ,'' ಎಂದು ಗುರುವಾರ ಬೆಳಿಗ್ಗೆ ತಿಳಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ತನ್ಹಾ, ಕಲಿತಾ, ನತಾಶಾ ಬಿಡುಗಡೆಗೊಳಿಸಿ ಕಡ್‌ಕಡ್‌ಡೂಮಾ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶದಂತೆ ಸಂಜೆಯ ವೇಳೆಗೆ ಮೂವರು ವಿದ್ಯಾರ್ಥಿಗಳನ್ನು ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂವರು ಆರೋಪಿಗಳಿಗೆ 50,000 ರೂ. ವೈಯಕ್ತಿಕ ಬಾಂಡ್‌ಗಳ ಜಾಮೀನು ಮೇರೆಗೆ ಬಿಡುಗಡೆಯಾಗಿದ್ದಾರೆ.
ಹಾಗೆಯೇ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ನಿವಾಸ ಬದಲಾವಣೆಯ ಸಂದರ್ಭದಲ್ಲಿ ಪೊಲೀಸ್ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದೆ. ಇದಲ್ಲದೆ, ಪ್ರಕರಣದ ಯಾವುದೇ ಸಾಕ್ಷಿದಾರರೊಂದಿಗೆ ಸಂಪರ್ಕವನ್ನು ಮಾಡದಂತೆ ಅಥವಾ ಸಾಕ್ಷ್ಯಗಳ ಹಾಳು ಮಾಡದಂತೆ ಆರೋಪಿಗಳಿಗೆ ಆದೇಶಿಸಿದೆ. ಜಾಮೀನಿನ ಮೇಲೆ ಹೊರಗಿರುವಾಗ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆಯೂ ಆರೋಪಿಗಳಿಗೆ ಆದೇಶಿಸಿದೆ
(ಒನ್‌ಇಂಡಿಯಾ ಸುದ್ದಿ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications