ತೈಲ ಬೆಲೆ ವಿಷಯದಲ್ಲಿ ಸರ್ಕಾರ ಧರ್ಮ ಸಂಕಟದಲ್ಲಿದೆ; ನಿರ್ಮಲಾ ಸೀತಾರಾಮನ್

ನವದೆಹಲಿ, ಮಾರ್ಚ್ 05: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆ ಕಂಡಿದ್ದು, ಈ ವಿಷಯ ಸರ್ಕಾರಕ್ಕೆ ಧರ್ಮ ಸಂಕಟವಾಗಿದೆ ಎಂದಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.

ನವ ದೆಹಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸುವ ಸಾಧ್ಯತೆ ಕುರಿತು ಪ್ರಶ್ನಿಸಿದಾಗ ಈ ರೀತಿ ಉತ್ತರಿಸಿದರು.

ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಹೊರೆಯಾಗಿದೆ ಎಂಬುದನ್ನು ಒಪ್ಪಿಕೊಂಡ ಅವರು, ಈ ಹೊರೆಯನ್ನು ಇಳಿಸಲು ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ಮಾತುಕತೆ ನಡೆಯಬೇಕಿದೆ ಎಂದು ಹೇಳಿದರು.

Rising Fuel Prices Became Dharmasankat For Central Government Said Nirmala Sitharaman

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಗ್ರಾಹಕರ ಅವಶ್ಯಕತೆ ನಮಗೆ ಅರ್ಥವಾಗಿದೆ. ಆದರೆ ಈಗ ಸರ್ಕಾರಕ್ಕೆ ಭೀಕರ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಏನೇನು ತೆರಿಗೆ ಸಂಗ್ರಹಿಸುತ್ತದೋ ಅದರಲ್ಲಿ 41%ರಷ್ಟು ರಾಜ್ಯಗಳಿಗೆ ಹೋಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ತೈಲ ಬೆಲೆ ಏರಿಕೆ ಸಾರ್ವಜನಿಕರು ಹಾಗೂ ಸರ್ಕಾರವನ್ನು ಚಿಂತೆಗೀಡು ಮಾಡಿದೆ. ಮುಂಬರುವ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಈ ವಿಷಯವನ್ನೇ ಅಸ್ತ್ರ ಮಾಡಿಕೊಳ್ಳುವುದಿಲ್ಲ ಎನ್ನುವ ನಂಬಿಕೆ ಇದೆ ಎಂದರು.

ಕೇಂದ್ರ ಸರ್ಕಾರ ಮಾತ್ರವಲ್ಲ, ರಾಜ್ಯ ಸರ್ಕಾರಗಳೂ ತೈಲ ಬೆಲೆ ಕುರಿತು ಚಿಂತಿಸಬೇಕಿದೆ. ರಾಜ್ಯಗಳಿಗೂ ಆದಾಯವಿದೆಯಲ್ಲವೇ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+