• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

2 ದಿನದ ಭಾರತ ಪ್ರವಾಸ : ದೆಹಲಿಗೆ ಆಗಮಿಸಿದ ವಾಡ್ಲಿಮಿರ್ ಪುಟಿನ್

|

ನವದೆಹಲಿ, ಅಕ್ಟೋಬರ್ 04 : ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಭಾರತ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಭಾರತ ಭೇಟಿಗಾಗಿ ಅವರು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದರು.

ಗುರುವಾರ ಸಂಜೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ವಾಡ್ಲಿಮಿರ್ ಪುಟಿನ್ಅವರನ್ನು ಸ್ವಾಗತಿಸಿದರು.

ಭಾರತಕ್ಕೆ ಆಗಮಿಸಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಾಡ್ಲಿಮಿರ್ ಪುಟಿನ್ ಅವರು ಭೇಟಿ ಮಾಡಲಿದ್ದಾರೆ. ಭಾರತ-ರಷ್ಯಾ ಸ್ನೇಹಗಟ್ಟಿಗೊಳಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ. ಉಭಯ ನಾಯಕರು 20 ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.

ಕೇರಳ ಪ್ರವಾಹ:ಕೋವಿಂದ್, ಮೋದಿಗೆ ವ್ಲಾಡಿಮಿರ್ ಪುಟಿನ್ ಪತ್ರ

19ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ವಾಡ್ಲಿಮಿರ್ ಪುಟಿನ್ ಪಾಲ್ಗೊಳ್ಳಲಿದ್ದಾರೆ. ಎರಡು ದಿನದ ಪ್ರವಾಸದಲ್ಲಿ ವಾಡ್ಲಿಮಿರ್ ಪುಟಿನ್ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ಹಲವಾರು ಒಪ್ಪಂದದ ಕುರಿತು ಮಹತ್ವದ ಮಾತುಕತೆ ನಡೆಯಲಿದೆ.

ರಷ್ಯಾದಿಂದ ರಕ್ಷಣಾ ಸಾಧನ ಖರೀದಿ: ಭಾರತದ ಮೇಲೆ ಅಮೆರಿಕ ನಿರ್ಬಂಧ?

5 ಶತಕೋಟಿ ಮೌಲ್ಯದ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಶುಕ್ರವಾರ ಸಹಿ ಹಾಕಲಿವೆ. ರಷ್ಯಾದಿಂದ ಎಸ್-400 ವಾಯು ಕ್ಷಿಪಣಿಗಳನ್ನು ಖರೀದಿಸಲು ಭಾರತ ಮುಂದಾಗಿದೆ.

English summary
Russia President Vladimir Putin arrived for his two-day visit to India. In Palam airport on October 4, 2018 evening he was received by External Affairs minister Sushma Swaraj.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X