ಇಂದು ಭಾರತಕ್ಕೆ ಆಗಮಿಸಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ, ಅಕ್ಟೋಬರ್ 04: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು(ಅ.04) ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಗುರುವಾರ ಆರಂಭವಾಗಲಿರುವ 19ನೇ ಭಾರತ-ರಷ್ಯಾ ದ್ವಿಪಕ್ಷೀಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ನವದೆಹಲಿಗೆ ಆಗಮಿಸಲಿರುವ ಅವರು, ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಲಿದ್ದಾರೆ.

S-400 ಟ್ರಿಯುಂಫ್ ಏರ್ ಡಿಫೆನ್ಸ್ ಸಿಸ್ಟಮ್ ಕುರಿತು ಮಹತ್ವದ ಒಪ್ಪಂದಗಳಿಗೆ ಈ ಸಂದರ್ಭದಲ್ಲಿ ಸಹಿ ಹಾಕುವ ಸಾಧ್ಯತೆ ಇದೆ.

Russian president Vladimir Putin to arrive to Delhi today

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಪುಟಿನ್ ಹೈದರಾಬಾದ್ ಹೌಸ್ ನಲ್ಲಿ ಮಹತ್ವದ ಮಾತುಕತೆ ನಡೆಸಲಿದ್ದು, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು ಈ ಸಮಯದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಕೇವಲ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಮಾತುಕತೆ ಮಾತ್ರವಲ್ಲದೆ, ದಿಗ್ಗಜ ದೇಶಗಳ ನಡುವೆ ಬಾಹ್ಯಾಕಾಶಕ್ಕೆ ಸಂಬಂಧಿಸಿದ ಸಹಕಾರದ ಮಾತುಕತೆಯೂ ನಡೆಯುವ ನಿರೀಕ್ಷೆಯಿದೆ.

ನಂತರ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನೂ ರಾಷ್ಟ್ರಪತಿ ಭವನದಲ್ಲಿ ಪುಟಿನ್ ಭೇಟಿಯಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+