'ಸ್ವಲ್ಪ ತಡೀರಿ...' ಶಬರಿಮಲೆ ಮೇಲ್ಮನವಿಗೆ ಸುಪ್ರೀಂ ಪ್ರತಿಕ್ರಿಯೆ!

Recommended Video

      Sabarimala Verdict : ಶಬರಿಮಲೈ ತೀರ್ಪಿನ ವಿರುದ್ಧ ಮೇಲ್ಮನವಿ ತುರ್ತು ವಿಚಾರಣೆಗೆ ಒಲ್ಲೆ ಎಂದ ಸುಪ್ರೀಂ ಕೋರ್ಟ್

      ನವದೆಹಲಿ, ಅಕ್ಟೋಬರ್ 09: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಲ್ಲೆ ಎಂದಿದೆ.

      ಮೇಲ್ಮನವಿಯ ತುರ್ತು ವಿಚಾರಣೆಯ ಅಗತ್ಯವಿಲ್ಲ. ಅದನ್ನು ನಿಧಾನವಾಗಿ ವಿಚಾರಣೆ ನಡೆಸಲಾಗುವುದು ಎಂದಿರುವ ಕೋರ್ಟ್, ತುರ್ತು ವಿಚಾರಣೆಯ ಮನವಿಯನ್ನು ತಿರಸ್ಕರಿಸಿದೆ.

      800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆ.28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದ ಮೇಲೆ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆ(National Ayyappa Devotee association) ಯು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸೋಮವಾರ ಮೇಲ್ಮನವಿ ಸಲ್ಲಿಸಿತ್ತು.

      Sabarimala verdict: Supreme Court refuses urgent hearing on a review petition

      ಈ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂಬ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆಯ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಈ ಕುರಿತ ವಿಚಾರಣೆಯನ್ನು ತುರ್ತಾಗಿ ಮಾಡುವ ಅಗತ್ಯವಿಲ್ಲ ಎಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+