ಶಬರಿಮಲೆ ಮೇಲ್ಮನವಿ: ಅ.23 ರಂದು ವಿಚಾರಣೆ ದಿನಾಂಕ ನಿಗದಿ

ನವದೆಹಲಿ, ಅಕ್ಟೋಬರ್ 22: ಶಬರಿಮಲೆ ತೀರ್ಪಿನ ಕುರಿತು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಅ.23, ಮಂಗಳವಾರದಂದು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

10-50 ವರ್ಷ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಿದ್ದ ಸುಪ್ರೀಂ ಕೋರ್ಟ್ ತೀರೊನ್ನು ವಿರೋಧಿಸಿ ಅಯ್ಯಪ್ಪ ಭಕ್ತರ ಸಮಿತಿ, ಅಯ್ಯಪ್ಪ ದೇವಾಲಯ ಆಡಳಿತ ಮಂಡಳಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಇದುವರೆಗೂ ಸುಮಾರು 19 ಕ್ಕೂ ಹೆಚ್ಚು ಮೇಲ್ಮನವಿ ಅರ್ಜಿಗಳು ಸುಪ್ರೀಂ ಕೋರ್ಟ್ ಬಳಿಯಿದೆ. ಈ ಅರ್ಜಿಗಳನ್ನು ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದ್ದ ಸುಪ್ರೀಂ ಕೋರ್ಟ್, ವಿಚಾರಣೆಯ ದಿನಾಂಕವನ್ನು ಮಂಗಳವಾರ ನಿಗದಿಗೊಳಿಸಲಿದೆ.

Sabarimala verdict: Supreme court to decide hearing date tomorrow

10 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ಋತುಮತಿಯಾಗುವ ಕಾರಣ ಕೇರಳದ ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈ ವಯಸ್ಸಿನ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ವಾದಿಸಲಾಗಿತ್ತು. ಈ ನಿರ್ಬಂಧವನ್ನು ಸೆ.28 ರಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿ ಐತಿಹಾಸಿಕ ತೀರ್ಪು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+