ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ತೀರ್ಪು: ಸುಪ್ರೀಂ ನಿಲುವಿಗೆ ಬದ್ಧ ಎಂದ ಅಯ್ಯಪ್ಪ ದೇಗುಲ

|
Google Oneindia Kannada News

ನವದೆಹಲಿ, ಫೆಬ್ರವರಿ 06: ಶಬರಿಮಲೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ತಾನು ಬದ್ಧ, ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಶಬರಿಮಲೆ ಅಯ್ಯಪ್ಪ ದೇಗುಲ ಆಡಳಿತ ಮಂಡಳಿ ತಿಳಿಸಿದೆ.

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು(ಬುಧವಾರ) ನಡೆಯಿತು.

ಶಬರಿಮಲೆ ತೀರ್ಪು: ಸುಪ್ರೀಂ ನಲ್ಲಿ ಇಂದು ಮೇಲ್ಮನವಿ ವಿಚಾರಣೆ ಶಬರಿಮಲೆ ತೀರ್ಪು: ಸುಪ್ರೀಂ ನಲ್ಲಿ ಇಂದು ಮೇಲ್ಮನವಿ ವಿಚಾರಣೆ

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.

Review Petition on Sabarimala verdict in Supreme court

ಆದರೆ ಇದೀಗ ತನ್ನ ವಾದವನ್ನು ಬದಲಿಸಿರುವ ದೇವಾಲಯ ಆಡಳಿತ ಮಂಡಳಿ ಸುಪ್ರೀಂ ತೀರ್ಪಿಗೆ ತಾನು ಬದ್ಧ ಎಂದಿದೆ.

"ಕೆಲವು ನಿರ್ದಿಷ್ಟ ವಯೋಮಾನದ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡದಿರುವುದು ಒಂದು ಅತ್ಯಗತ್ಯ ಧಾರ್ಮಿಕ ಆಚರಣೆಗೆ ಅಗತ್ಯ ಎಂದು ಅನ್ನಿಸುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

English summary
The Supreme Court on Wednesday started hearing a batch of pleas seeking review of its judgement allowing women of all ages to enter Kerala's Sabarimala temple complex.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X