ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದ ಉಪಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಆಯ್ಕೆ

|
Google Oneindia Kannada News

ನವದೆಹಲಿ, ಡಿಸೆಂಬರ್ 14: ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಅವರನ್ನು ರಾಜಸ್ಥಾನದ ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆಗೆ ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ಅವರ ನಡುವೆ ಬಿರುಸಿನ ಪೈಪೋಟಿ ಇತ್ತು. ಆದರೆ ಹಿರಿತನ ಮತ್ತು ಅನುಭವದ ಆಧಾರದ ಮೇಲೆ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲು ಕಾಂಗ್ರೆಸ್ ತೀರ್ಮಾನಿಸಿದ್ದು, ಪೈಲಟ್ ಉಪಮುಖ್ಯಮಂತ್ರಿ ಹುದ್ದೆಗೇ ತೃಪ್ತಿ ಪಟ್ಟುಕೊಳ್ಳಬೇಕಿದೆ.

ರಾಜಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಸಿಎಂ: ಅಧಿಕೃತ ಘೋಷಣೆ ಬಾಕಿರಾಜಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಸಿಎಂ: ಅಧಿಕೃತ ಘೋಷಣೆ ಬಾಕಿ

ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಸಚಿನ್ ಪೈಲಟ್ ಅವರೇ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿ ಆಯ್ಕೆಗೆ ಹಲವು ಸುತ್ತಿನ ಸಭೆಗಳು ನಡೆದಿದ್ದು, ಇಂದು ಸಂಜೆಯ ವೇಳೆಗೆ ಅಧಿಕೃತ ಘೋಷಣೆ ಹೊರಬೀಳಲಿದೆ.

Sachin pilot to be DyCM of Rajasthan

ರಾಜಸ್ಥಾನದ 200 ಕ್ಷೇತ್ರಗಳ ವಿಧಾನಸಭೆ ಚುನಾವಣೆ ಡಿಸೆಂಬರ್ 7 ರಂದು ಮತದಾನ ನಡೆದಿತ್ತು. ಡಿ.11 ರಂದು ಫಲಿತಾಂಶ ಹೊರಬಿದ್ದ ಫಲಿತಾಂಶದಲ್ಲಿ 99 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್, ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ.

English summary
Congress leader Sachin Pilot to be the Deputy Chief Minister of Rajasthan. He will also continue to be the Rajasthan Congress Chief sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X