ಅಮಾನತಾದ ಆಪ್ ನ ಕಪಿಲ್ ಮಿಶ್ರಾ ಮೇಲೆ ದಾಳಿ
ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ, ಆಮ್ ಆದ್ಮಿ ಪಕ್ಷದಿಂದ ಅಮಾನತಾದ ಕಪಿಲ್ ಮಿಶ್ರಾ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ದಾಳಿಗೆ ಆಪ್ ಬೆಂಬಲಿಗರು ಹಾಗೂ ಅರವಿಂದ್ ಕೇಜ್ರಿವಾಲ್ ಕಾರಣ ಎಂದು ಮಿಶ್ರಾ ಆರೋಪಿಸಿದ್ದಾರೆ
ನವದೆಹಲಿ, ಮೇ 10: ಆಮ್ ಆದ್ಮಿ ಪಕ್ಷದಿಂದ ಅಮಾನತಾದ ಮಾಜಿ ಸಚಿವ ಕಪಿಲ್ ಮಿಶ್ರಾ ಅವರ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆಯಿಂದ ಮಿಶ್ರಾ ಉಪವಾಸ ಸತ್ಯಾಗ್ರಹ ಕೂತಿದ್ದರು. ಮಾಧ್ಯಮಗಳ ಜತೆಗೆ ಮಾತನಾಡಿ, ಮಿಶ್ರಾ ಹಿಂತಿರುಗಿದ ಕೆಲ ಸಮಯದಲ್ಲೇ ಹಲ್ಲೆಯಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಈ ದಾಳಿ ನಡೆಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. "ಒಬ್ಬ ದಾಳಿಕೋರ ನನ್ನ ಮೇಲೆ ಎರಗಿ ಬಂದ. ಅವರು ದಾಳಿ ನಡೆಸಲಿ. ಆದರೆ ನನ್ನ ಹೋರಾಟವನ್ನು ನಿಲ್ಲಿಸುವುದಿಲ್ಲ" ಎಂದು ದಾಳಿಯ ನಂತರ ಕಪಿಲ್ ಮಿಶ್ರಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.[ಕೇಸು ಹಾಕ್ತಿದ್ದೇನೆ ಆಶೀರ್ವಾದ ಮಾಡಿ ಎಂದ ಕಪಿಲ್ ಮಿಶ್ರಾ!]

ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಸಂಪುಟದ ಮಂತ್ರಿಗಳು ಅವರ ವಿದೇಶಿ ಪ್ರವಾಸಗಳ ಬಗ್ಗೆ ವಿವರಗಳನ್ನು ಬಹಿರಂಗ ಮಾಡುವವರೆಗೆ ಅನಿರ್ದಿಷ್ಟಾವಧಿ ಕಾಲದವರೆಗೆ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತೇನೆ ಎಂದು ಆಮ್ ಆದ್ಮಿ ಪಕ್ಷದಿಂದ ಅಮಾನತಾಗಿರುವ ಕಪಿಲ್ ಮಿಶ್ರಾ ಅವರು ಹೇಳಿದ್ದಾರೆ.












Click it and Unblock the Notifications