• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ತ್ಯಾಗ ವ್ಯರ್ಥವಾಗುವುದಿಲ್ಲ: ಜೆಪಿ ನಡ್ಡಾ

|

ನವದೆಹಲಿ,ಅಕ್ಟೋಬರ್ 30: ಕಾಶ್ಮೀರದಲ್ಲಿ ಶಂಕಿತ ಉಗ್ರರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ತ್ಯಾಗ ಎಂದಿಗೂ ವ್ಯರ್ಥವಾಗದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಕಾಶ್ಮೀರದಲ್ಲಿ ಶಂಕಿತ ಉಗ್ರರ ಗುಂಡಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಬಲಿಯಾಗಿದ್ದರು.ಇಡೀ ಸಮಾಜವು ದುಃಖಿತ ಕುಟುಂಬಗಳೊಂದಿಗೆ ಇದೆ ಮತ್ತು ಅವರ ತ್ಯಾಗವು ವ್ಯರ್ಥವಾಗುವುದಿಲ್ಲ ಎಂದು ನಡ್ಡಾ ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಕಳೆದ ಜೂನ್ ತಿಂಗಳಿನಿಂದ ಉಗ್ರರು ಕಣಿವೆ ಪ್ರದೇಶದಲ್ಲಿ ಕಾರ್ಯಕರ್ತರು ಮತ್ತು ನಾಯಕರ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಲೇ ಬಂದಿದ್ದಾರೆ. ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ.

ಅಂತಹ ರಾಷ್ಟ್ರೀಯವಾದಿಗಳನ್ನು ಕಳೆದುಕೊಳ್ಳುವುದು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ. ಕುಲ್ಗಾಮ್ ಜಿಲ್ಲೆಯ ವೈ ಕೆ ಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳಿಂದ ಫಿಡಾ ಹುಸೇನ್, ಉಮರ್ ಹಜಮ್ ಮತ್ತು ಉಮರ್ ರಶೀದ್ ಬೈಗ್ ಗುಂಡಿನ ದಾಳಿಗೆ ಸಿಕ್ಕಿ ಬಲಿಯಾಗಿದ್ದರು.

ಜಮ್ಮು ಮತ್ತು ಕಾಶ್ಮೀರದ ಕುಲ್‌ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರು ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಗೀಡಾದ ಮೂವರು ಕಾರ್ಯಕರ್ತರು ಅತ್ಯುತ್ತಮ ಕೆಲಸ ಮಾಡುತ್ತಿದ್ದ ಯುವಕರಾಗಿದ್ದರು ಎಂದು ಹೇಳಿದ್ದಾರೆ.

ಈ ಮಧ್ಯೆ ಲೆಫ್ಟಿನೆಂಟ್ ಗೌರ್‍ನರ್ ಮನೋಜ್ ಸಿನ್ಹಾ ಉಗ್ರರ ಪೈಶಾಚಿಕ ಕೃತ್ಯವನ್ನು ಕಠಿಣ ಶಬ್ಧಗಳಲ್ಲಿ ಖಂಡಿಸಿದ್ದು, ಇಂತಹ ವಿಧ್ವಂಸಕ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಮ್ಮು-ಕಾಶ್ಮೀರ ಬಿಜೆಪಿ ಘಟಕದ ಅಧ್ಯಕ್ಷ ರವೀಂದರ್ ರೈನಾ ಕುಲ್‌ಗಾಂ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದು, ಇದಕ್ಕೆಪಾಕಿಸ್ತಾನ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕುಲ್‌ಗಾಂ ಜಿಲ್ಲೆಯ ವೈ,ಕೆ. ಪೊರಾ ಪ್ರದೇಶದಲ್ಲಿ ನಿನ್ನೆ ಸಂಜೆ ಫಿದಾ ಹುಸೈನ್, ಉಮರ್ ಹಜಾಮ್ ಮತ್ತು ಊಮರ್ ರಷೀದ್ ಬೇಗ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು. ಈ ದಾಳಿಯ ಹೊಣೆಯನ್ನು ಎಲ್‌ಇಟಿ ಸಂಘಟನೆ ಜತೆ ಗುರುತಿಸಿಕೊಂಡಿರುವ ದ ರೆಸಿಸ್ಟನ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

English summary
BJP president JP Nadda on Fridy condemned the killing of three workers of his party’s youth wing in Jammu and Kashmir’s Kulgam district on Thursday, saying their sacrifice will not go in vain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X