ನವದೆಹಲಿಯಲ್ಲಿ ಕಟ್ಟಡ ಕುಸಿತ, ಇಬ್ಬರ ಸಾವು
ನವದೆಹಲಿ, ಜೂ.1: ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟು, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನೂ ಹಲವು ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಉತ್ತರ ದೆಹಲಿಯ ಸದರ್‌ಬಜಾರ್‌ನಲ್ಲಿ ನಿರ್ಮಾಣ ಹಂತದಲ್ಲಿದ ನಾಲ್ಕು ಅಂತಸ್ತಿನನ ಕಟ್ಟಡ ಕುಸಿದು ಬಿದ್ದ ಪರಿಣಾಮ ಸುಮಾರು 11 ಜನರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಭಾನುವಾರ ಮಧ್ಯಾಹ್ನ 12.55ರ ಸುಮಾರಿಗೆ ಸುದ್ದಿ ತಿಳಿದ ಕೂಡಲೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿದ್ದಾರೆ. ಕಟ್ಟಡ ಅವಶೇಷಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನಿರ್ಮಾಣ ಹಂತದ ಕಟ್ಟಡವಾಗಿರುವುದರಿಂದ ಕಟ್ಟಡದ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಒಬ್ಬ ವ್ಯಕ್ತಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದರೆ, ಅವಶೇಷದಡಿಯಲ್ಲಿದ್ದ ಮತ್ತೊಬ್ಬನನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುತ್ತಾನೆ ಎಂದು ದೆಹಲಿ ಉತ್ತರ ವಲಯ ಉಪ ಆಯುಕ್ತರಾದ ಸಿಂಧು ಪಿಳ್ಳೈ ಹೇಳಿದ್ದಾರೆ. ಕಟ್ಟಡ ನಿರ್ಮಾಣ ಹಂತದಲ್ಲಿರುವಾಗ ಕುಸಿದಿದ್ದು, ಮೃತರನ್ನು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಎಂದು ಗುರುತಿಸಲಾಗಿದೆ, ಸಾವು ನೋವಿನ ವಿವರ ಸದ್ಯಕ್ಕೆ ಸ್ಪಷ್ಟವಾಗಿವಾಗಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಈ ಹಿಂದೆ ಉತ್ತರ ದೆಹಲಿಯ ಪಹರ್ ಧೀರಜ್ ಪ್ರದೇಶದಲ್ಲಿ ಇದೇ ರೀತಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮಹಿಳೆಯರನ್ನು ಬಲಿ ತೆಗೆದುಕೊಂಡಿತ್ತು. (ಪಿಟಿಐ)












Click it and Unblock the Notifications