ಜುಮಾ ಮಸೀದಿಯನ್ನು ಧ್ವಂಸಗೊಳಿಸಿ: ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆ
ನವದೆಹಲಿ, ನವೆಂಬರ್ 23: ದೆಹಲಿಯ ಜಮಾ ಮಸೀದಿಯನ್ನು ಧ್ವಂಸ ಮಾಡುವಂತೆ ಬಿಜೆಪಿಯ ಸಂಸದ ಸಾಕ್ಷಿ ಮಹಾರಾಜ್ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉನ್ನಾವೊ ಕ್ಷೇತ್ರದ ಸಂಸದರಾದ ಸಾಕ್ಷಿ ಮಹಾರಾಜ್, ಒಂದು ವೇಳೆ ಮಸೀದಿಯನ್ನು ಧ್ವಂಸಗೊಳಿಸಿದಾಗ ಹಿಂದೂ ದೇವತೆಗಳ ವಿಗ್ರಹ ಪತ್ತೆಯಾಗದೆ ಇದ್ದರೆ ತಮ್ಮನ್ನು ನೇಣಿಗೇರಿಸುವಂತೆ ಸವಾಲು ಹಾಕಿದ್ದಾರೆ.
ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸ್ಪಷ್ಟವಾಗಿದೆ ಎಂದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ನಾಯಕಿ ಮಾಯಾವತಿ ಮತ್ತು ಎಸ್ಪಿ ರಾಜ್ಯಾಧ್ಯಕ್ಷ ಅಖಿಲೇಶ್ ಯಾದವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

'ನಾನು ರಾಜಕೀಯಕ್ಕೆ ಬಂದಾಗ ನನ್ನ ಮೊದಲ ಹೇಳಿಕೆ ನೀಡಿದ್ದು ಮಥುರಾದಲ್ಲಿ. ಅಯೋಧ್ಯಾ, ಮಥುರಾ ಮತ್ತು ಕಾಶಿಯನ್ನು ಬಿಡಲು ದೆಹಲಿಯ ಜಮಾ ಮಸೀದಿಯನ್ನು ಉರುಳಿಸಬೇಕು. ಅದರ ಮೆಟ್ಟಿಲುಗಳ ಕೆಳಗೆ ವಿಗ್ರಹಗಳು ಪತ್ತೆಯಾಗದೆ ಇದ್ದರೆ ನನ್ನನ್ನು ನೇಣಿಗೇರಿಸಬೇಕು. ನಾನು ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ' ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾಗಿ ಇಂಡಿಯನ್ಸ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಭಾರತದಲ್ಲಿ ಶರಿಯಾ ಕಾನೂನು ಬರಬೇಕು ಎನ್ನುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಜುಲೈನಲ್ಲಿ ಅವರು ಹೇಳಿದ್ದರು.
ದೇಶಕ್ಕೆ ಒಂದೇ ರೀತಿಯ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿದ್ದ ಅವರು, ಜನಸಂಖ್ಯಾ ಸ್ಫೋಟಕ್ಕೆ ಮುಸ್ಲಿಮರೇ ಕಾರಣ ಎಂದೂ ಹೇಳಿಕೆ ನೀಡಿದ್ದರು.
ಅಲ್ಲದೆ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಸ್ವಯಂ ಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಪರ ಮಾತನಾಡಿದ್ದ ಸಾಕ್ಷಿ, ಅವರೊಬ್ಬ ಸರಳ ಮನುಷ್ಯ ಎಂದು ಬಣ್ಣಿಸಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications