ಸತ್ಯಾಗ್ರಹದಿಂದ ದೌರ್ಜನ್ಯ, ಅನ್ಯಾಯಕ್ಕೆ ಕೊನೆ: ರಾಹುಲ್ ಗಾಂಧಿ
ನವದೆಹಲಿ, ಮಾರ್ಚ್ 26: ಸತ್ಯಾಗ್ರಹದಿಂದ ಅನ್ಯಾಯ, ದೌರ್ಜನ್ಯ ಕೊನೆಗೊಳ್ಳುತ್ತದೆ ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲ ಸೂಚಿಸಿದರು.
ಕೃಷಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳುಕಳೆದ ನಾಲ್ಕು ತಿಂಗಳಿನಿಂದ ದೆಹಲಿಯ ಗಡಿಭಾಗಗಳಾದ ಸಿಂಘು, ಗಾಜಿಪುರ ಮತ್ತು ಟಿಕ್ರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವರ ಮುಂದುವರೆದ ಭಾಗವಾಗಿ ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಭಾರತ ಬಂದ್‌ಗೆ ಕರೆ ನೀಡಿವೆ.
ಈ ಚಳವಳಿ ದೇಶದ ಹಿತಕ್ಕಾಗಿ ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದು ಹೇಳಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ದೆಹಲಿಯ ಗಾಜಿಪುರ, ಸಿಂಘು ಗಡಿಗಳಲ್ಲಿ ಧರಣಿ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಇನ್ನು ಆಂದ್ರಪ್ರದೇಶದ ವಿಶಾಖಪಟ್ಟಣದಲ್ಲಿ ಎಡಪಕ್ಷಗಳ ಕಾರ್ಯಕರ್ತರು ರಸ್ತೆಗಳನ್ನು ತಡೆದು, ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಎರಡನೇ ಭಾರತ ಬಂದ್ ಇದಾಗಿದೆ. ಡಿ.8ರಂದು ರೈತರು ನಡೆಸಿದ್ದ ಬಂದ್‌ಗೆ ದೆಹಲಿ, ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಹಾಗೂ ಅಸ್ಸಾಂನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications