• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸತ್ಯಾಗ್ರಹದಿಂದ ದೌರ್ಜನ್ಯ, ಅನ್ಯಾಯಕ್ಕೆ ಕೊನೆ: ರಾಹುಲ್ ಗಾಂಧಿ

|

ನವದೆಹಲಿ, ಮಾರ್ಚ್ 26: ಸತ್ಯಾಗ್ರಹದಿಂದ ಅನ್ಯಾಯ, ದೌರ್ಜನ್ಯ ಕೊನೆಗೊಳ್ಳುತ್ತದೆ ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲ ಸೂಚಿಸಿದರು.

ಕೃಷಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳುಕಳೆದ ನಾಲ್ಕು ತಿಂಗಳಿನಿಂದ ದೆಹಲಿಯ ಗಡಿಭಾಗಗಳಾದ ಸಿಂಘು, ಗಾಜಿಪುರ ಮತ್ತು ಟಿಕ್ರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವರ ಮುಂದುವರೆದ ಭಾಗವಾಗಿ ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಭಾರತ ಬಂದ್‌ಗೆ ಕರೆ ನೀಡಿವೆ.

ಭಾರತ್ ಬಂದ್‌ನ ಭಾರತ್ ಬಂದ್‌ನ "Picture": ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ ಹೇಗಿದೆ?

ಈ ಚಳವಳಿ ದೇಶದ ಹಿತಕ್ಕಾಗಿ ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದು ಹೇಳಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ದೆಹಲಿಯ ಗಾಜಿಪುರ, ಸಿಂಘು ಗಡಿಗಳಲ್ಲಿ ಧರಣಿ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಇನ್ನು ಆಂದ್ರಪ್ರದೇಶದ ವಿಶಾಖಪಟ್ಟಣದಲ್ಲಿ ಎಡಪಕ್ಷಗಳ ಕಾರ್ಯಕರ್ತರು ರಸ್ತೆಗಳನ್ನು ತಡೆದು, ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಎರಡನೇ ಭಾರತ ಬಂದ್ ಇದಾಗಿದೆ. ಡಿ.8ರಂದು ರೈತರು ನಡೆಸಿದ್ದ ಬಂದ್‌ಗೆ ದೆಹಲಿ, ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಹಾಗೂ ಅಸ್ಸಾಂನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

English summary
India's history shows that "satyagraha" ends atrocities, injustice and arrogance, Congress leader Rahul Gandhi said on Friday, expressing support for the "Bharat Bandh" called by farmer unions protesting the three agri laws.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X