ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭ್ರಷ್ಟಾಚಾರ ಪ್ರಕರಣ: ಕೇರಳ ಮುಖ್ಯಮಂತ್ರಿ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

|
Google Oneindia Kannada News

ನವದೆಹಲಿ,ಫೆಬ್ರವರಿ 23: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧದ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಭ್ರಷ್ಟಾಚಾರ ಪ್ರಕರಣವೊಂದರಿಂದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಇತರರನ್ನು ಮುಕ್ತಗೊಳಿಸುವುದರ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಕಲ್ಲಿದ್ದಲು ಹಗರಣ: ಟಿಎಂಸಿ ಸಂಸದನ ಮನೆಗೆ ಬೇಟಿ ನೀಡಿದ ಸಿಬಿಐಕಲ್ಲಿದ್ದಲು ಹಗರಣ: ಟಿಎಂಸಿ ಸಂಸದನ ಮನೆಗೆ ಬೇಟಿ ನೀಡಿದ ಸಿಬಿಐ

1996ರಲ್ಲಿ ಪಿಣರಾಯಿ ವಿಜಯನ್ ಅವರು ಇಂಧನ ಸಚಿವರಾಗಿದ್ದಾಗ, ಕೆನಡಾ ಮೂಲದ ಎಸ್‌ಎನ್‌ಸಿ-ಲಾವಲಿನ್ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡುವ ವಿಷಯದಲ್ಲಿ ಸರ್ಕಾರಕ್ಕೆ 374.50 ಕೋಟಿ ರೂ ನಷ್ಟ ಮಾಡಿದ್ದಾರೆ ಹಾಗೂ ಗುತ್ತಿಗೆ ವಿಷಯದಲ್ಲಿ ಭ್ರಷ್ಟಾಚಾರನಡೆಸಿದ್ದಾರೆ ಎನ್ನುವ ಆರೋಪವೂ ಕೂಡ ಕೇಳಿಬಂದಿತ್ತು.

SC Adjourns Hearing On CBI Plea Against Discharge Of Kerala CM, Others In Graft Case

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಯು.ಯು.ಲಲಿತ್ ನೇತೃತ್ವದ ಪೀಠ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿತು.ಇದಕ್ಕೂ ಮೊದಲು ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ನಾನು ಮತ್ತೊಂದು ಪ್ರಕರಣದಲ್ಲಿ ಇನ್ನೊಂದು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

ಹಾಗಾಗಿ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.ಸಾಲಿಸಿಟರ್ ಜನರಲ್ ಅವರ ಮನವಿಯನ್ನು ಪುರಸ್ಕರಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿತು.

English summary
The Supreme Court Tuesday adjourned the hearing on CBI''s plea against the discharge of Kerala Chief Minister Pinarayi Vijayan and two others in a graft case related to awarding of a contract to Canadian firm SNC-Lavalin when he was the power minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X