ಜಯಲಲಿತಾ ವಿರುದ್ಧದ ವಿಚಾರಣೆಗೆ ತಡೆ ಇಲ್ಲ

ನವದೆಹಲಿ, ಜೂ. 17 : ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಚಾರಣೆ ತಡೆ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಚೆನ್ನೈನ ಲೆಕ್ಸ್‌ ಪ್ರಾಪರ್ಟಿ ಡೆವಲಪ್ ಮೆಂಟ್ ಸಂಸ್ಥೆ ತಮ್ಮ ವಿರುದ್ಧ ನೀಡಿದ್ದ ದೂರಿನ ವಿಚಾರಣೆ ಪೂರ್ಣಗೊಳ್ಳುವವರೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕೆಂದು ಜಯಲಲಿತಾ ಮನವಿ ಮಾಡಿದ್ದರು.

Jayalalithaa

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಮತ್ತು ಶಿವಕಾರ್ತಿ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಜಯಲಿಲಿತಾ ಅವರು ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ. [ಜಯಲಲಿತಾ ಚಿನ್ನ, ಬೆಳ್ಳಿ ಕೋರ್ಟ್ ವಶಕ್ಕೆ]

ಪ್ರಕರಣವೇನು : ಜಯಲಲಿತಾ 1991 ರಿಂದ 1996ರ ಅವಧಿಯಲ್ಲಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 66.65 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದ ಸಂಬಂಧ ದೂರು ದಾಖಲಾಗಿದ್ದು. ಆ ಸಂದರ್ಭದಲ್ಲಿ ಅವರ ಮನೆ ಮೇಲೆ ದಾಳಿ ನಡೆದಿತ್ತು. ಈ ಕುರಿತ ವಿಚಾರಣೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಬೇನಾಮಿ ಹೆಸರಲ್ಲಿ ಜಯಲಲಿತಾ ಅವರು ಆಸ್ತಿ ಮಾಡಿದ್ದಾರೆ ಎಂದು ಚೆನ್ನೈನ ಲೆಕ್ಸ್‌ ಪ್ರಾಪರ್ಟಿ ಡೆವಲಪ್ ಮೆಂಟ್ ಸಂಸ್ಥೆ ದೂರು ಸಲ್ಲಿಸಿದೆ. ಈ ದೂರಿನ ವಿಚಾರಣೆ ಪೂರ್ಣಗೊಳ್ಳುವವರೆಗೆ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಜಯಲಲಿತಾ ಮನವಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+