ಅತ್ಯಾಚಾರಿಯನ್ನೇ ಮದುವೆಯಾಗುವುದಾಗಿ ಮನವಿ: ಸಂತ್ರಸ್ತೆಯ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್
ನವದೆಹಲಿ, ಆಗಸ್ಟ್ 02: ಅತ್ಯಾಚಾರಯನ್ನೇ ಮದುವೆಯಾಗುವುದಾಗಿ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಕೇರಳದ ಕೊಟ್ಟಿಯೂರಿನಲ್ಲಿ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಮದುವೆಯಾಗಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ತಾನು ಸಂತ್ರಸ್ತೆಯನ್ನು ಮದುವೆಯಾಗಬೇಕೆಂದು ಭಾವಿಸಿದ್ದೆ, ಆದರೆ ಅತ್ಯಾಚಾರದ ವೇಳೆ ಆಕೆ ಅಪ್ರಾಪ್ತಳಾಗಿದ್ದಳು, ಬಳಿಕ ಆಕೆ ಮಗುವಿಗೆ ಜನ್ಮ ನೀಡಿದಳು ಎಂಬ ಕಾರಣ ನೀಡಿ ಮಾಜಿ ಪಾದ್ರಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾದ್ರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯ ವಜಾಗೊಳಿಸಿದೆ.
ಈ ಸಂಬಂಧ ಹೈಕೋರ್ಟ್ ಪ್ರಜ್ಞಾಪೂರ್ವಕವಾಗಿ ನಿರ್ಧಾರ ಕೈಗೊಂಡಿದೆ, ನ್ಯಾಯಾಲಯವು ಅದರ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಅವರ ಪೀಠ ಹೇಳಿದೆ.
ಮಾಜಿ ಪಾದ್ರಿಯನ್ನು ವರಿಸುವುದಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ವಿಚಾರಣಾ ನಾಯಾಲಯದ ಕದ ತಟ್ಟಬಹುದು ಎಂದು ಪೀಠ ಹೇಳಿದೆ.
ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪಾದ್ರಿಯೊಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ತಮ್ಮನ್ನು ಬಲಾತ್ಕಾರ ಮಾಡಿದ್ದ ಪಾದ್ರಿಯೊಂದಿಗೆ ಮದುವೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
2016ರಲ್ಲಿ ಪಾದ್ರಿಯವರ ನಿವಾಸದಲ್ಲಿ ಆಗ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಈ ಮಹಿಳೆಯ ಮೇಲೆ ಪಾದ್ರಿ ವಡಕ್ಕುಂಚೆರಿ ಅತ್ಯಾಚಾರ ಎಸಗಿದ್ದರು. ಇದು ಹೊರಬಂದ ಬಳಿಕ, ವಡಕ್ಕುಚೆರಿಯವರನ್ನು ಪಾದ್ರಿ ಸ್ಥಾನದಿಂದ ತೆಗೆದುಹಾಕಲಾಗಿತ್ತು.
ಸಂತ್ರಸ್ತೆ ಸಲ್ಲಿಸಿದ ಮನವಿ ಸೋಮವಾರ ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬಂದಿತು, ವಡಕ್ಕುಚೆರಿ ಅವರಿಗೆ ಜಾಮೀನು ನೀಡುವಂತೆ ಸಂತ್ರಸ್ತೆ ಕೋರಿದ್ದಾರೆ. ತನ್ನ ಸ್ವಂತ ಅಭಿಪ್ರಾಯದಿಂದ ಈ ಮನವಿ ಸಲ್ಲಿಸುತ್ತಿದ್ದೇನೆ ಎಂದು ಕೂಡ ಸಂತ್ರಸ್ತೆ ಹೇಳಿದ್ದಾರೆ.
ಈ ಹಿಂದೆ ವಡಕ್ಕುಚೆರಿ ಸಂತ್ರಸ್ತೆಯನ್ನು ವಿವಾಹವಾಗಲು ಅನುಮತಿ ನೀಡುವಂತೆ ಕೋರಿ ಕೇರಳ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು, ಆದರೆ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ಕಣ್ಣುರು ಸಮೀಪದ ಚರ್ಚ್‌ನಲ್ಲಿ ವಡಕ್ಕುಚೆರಿ ಪ್ಯಾರಿಶ್ ವಿರಾಕ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಚರ್ಚ್ ಶಾಲೆಯಲ್ಲಿ ಮ್ಯಾನೇಜರ್ ಆಗಿ ಕೂಡ ಇದ್ದರು.
ಈ ಸಂದರ್ಭದಲ್ಲಿ 10ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದರು.
2017ರ ಫೆಬ್ರವರಿ 7 ರಂದು ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು, ಈ ಹಿನ್ನೆಲೆಯಲ್ಲಿ ವಡಕ್ಕುಚೆರಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದರು, ಆ ಸಂದರ್ಭದಲ್ಲಿ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಿಂದ 2017ರ ಫೆಬ್ರವರಿ 27ರಂದು ಅವರನ್ನು ಪೊಲೀಸರು ಬಂಧಿಸಿದ್ದರು.
ಮತ್ತೊಂದು ಘಟನೆಯಲ್ಲಿ ಮೈಸೂರಿನ ಬಿಷಪ್ ಡಾ.ಕೆ.ಎಂ.ವಿಲಿಯಂ ಅವರು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ, ಈ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಚರ್ಚ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಮೈಸೂರು ಬಿಷಪ್ ಡಾ.ಕೆ.ಎಂ.ವಿಲಿಯಂ ಅವರ ಮೇಲೆ ಬಂದಿದ್ದು, ಕಾನೂನು ಪ್ರಕಾರ ಬಿಷಪ್ ವಿಲಿಯಂ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಒಸಿಸಿ ಮುಖಂಡ ರಾಬರ್ಟ್ ರೋಸಾರಿಯೋ ಒತ್ತಾಯಿಸಿದ್ದರು.
ಚರ್ಚ್‌ನಲ್ಲಿ ಓರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದರು. ಮತ್ತಷ್ಟು ಮಾಹಿತಿ ನೀಡಿದ ಅವರು, ದೈಹಿಕ ಸಂಪರ್ಕಕ್ಕೆ ಆಕೆ ಒಪ್ಪದಿದ್ದಾಗ ಆಕೆಯನ್ನು ಕೆಲಸದಿಂದ ತೆಗಿಯುವ ಪ್ಲಾನ್ ಮಾಡಿದ್ದರು.
ಆ ಯುವತಿ ಇಡೀ ಘಟನೆ ಬಗ್ಗೆ ಒಂದು ವಿಡಿಯೋ ಮಾಡಿದ್ದಾಳೆ. ಆ ವಿಡಿಯೋದಲ್ಲಿ ಬಿಷಪ್ ಮಾಡಿರುವ ಎಲ್ಲ ಹಗರಣ ಹಾಗೂ ದೌರ್ಜನ್ಯದ ಮಾಹಿತಿ ನೀಡಿದ್ದಾಳೆ. ಆ ವಿಡಿಯೋದಲ್ಲಿ ಅಪಹರಣ, ಕೊಲೆ ಯತ್ನ ಹಾಗೂ ಬೆದರಿಕೆಯ ಎಲ್ಲ ಮಾಹಿತಿ ನೀಡಿದ್ದಾಳೆ ಎಂದು ಹೇಳಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications