ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರಿಯನ್ನೇ ಮದುವೆಯಾಗುವುದಾಗಿ ಮನವಿ: ಸಂತ್ರಸ್ತೆಯ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಆಗಸ್ಟ್ 02: ಅತ್ಯಾಚಾರಯನ್ನೇ ಮದುವೆಯಾಗುವುದಾಗಿ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಕೇರಳದ ಕೊಟ್ಟಿಯೂರಿನಲ್ಲಿ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಮದುವೆಯಾಗಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಯುವತಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಗ್ರಾಂ. ಪಂ ಸದಸ್ಯಯುವತಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಗ್ರಾಂ. ಪಂ ಸದಸ್ಯ

ತಾನು ಸಂತ್ರಸ್ತೆಯನ್ನು ಮದುವೆಯಾಗಬೇಕೆಂದು ಭಾವಿಸಿದ್ದೆ, ಆದರೆ ಅತ್ಯಾಚಾರದ ವೇಳೆ ಆಕೆ ಅಪ್ರಾಪ್ತಳಾಗಿದ್ದಳು, ಬಳಿಕ ಆಕೆ ಮಗುವಿಗೆ ಜನ್ಮ ನೀಡಿದಳು ಎಂಬ ಕಾರಣ ನೀಡಿ ಮಾಜಿ ಪಾದ್ರಿ ಜಾಮೀನು ಅರ್ಜಿ ಸಲ್ಲಿಸಿದ್ದರು.

SC Dismisses Plea Of Rape Survivor From Kerala Seeking Permission To Marry Her Assaulter

ಈ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾದ್ರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ನ್ಯಾಯಾಲಯ ವಜಾಗೊಳಿಸಿದೆ.

ಈ ಸಂಬಂಧ ಹೈಕೋರ್ಟ್ ಪ್ರಜ್ಞಾಪೂರ್ವಕವಾಗಿ ನಿರ್ಧಾರ ಕೈಗೊಂಡಿದೆ, ನ್ಯಾಯಾಲಯವು ಅದರ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಅವರ ಪೀಠ ಹೇಳಿದೆ.

ಮಾಜಿ ಪಾದ್ರಿಯನ್ನು ವರಿಸುವುದಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ವಿಚಾರಣಾ ನಾಯಾಲಯದ ಕದ ತಟ್ಟಬಹುದು ಎಂದು ಪೀಠ ಹೇಳಿದೆ.

ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪಾದ್ರಿಯೊಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ತಮ್ಮನ್ನು ಬಲಾತ್ಕಾರ ಮಾಡಿದ್ದ ಪಾದ್ರಿಯೊಂದಿಗೆ ಮದುವೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

2016ರಲ್ಲಿ ಪಾದ್ರಿಯವರ ನಿವಾಸದಲ್ಲಿ ಆಗ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಈ ಮಹಿಳೆಯ ಮೇಲೆ ಪಾದ್ರಿ ವಡಕ್ಕುಂಚೆರಿ ಅತ್ಯಾಚಾರ ಎಸಗಿದ್ದರು. ಇದು ಹೊರಬಂದ ಬಳಿಕ, ವಡಕ್ಕುಚೆರಿಯವರನ್ನು ಪಾದ್ರಿ ಸ್ಥಾನದಿಂದ ತೆಗೆದುಹಾಕಲಾಗಿತ್ತು.

ಸಂತ್ರಸ್ತೆ ಸಲ್ಲಿಸಿದ ಮನವಿ ಸೋಮವಾರ ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬಂದಿತು, ವಡಕ್ಕುಚೆರಿ ಅವರಿಗೆ ಜಾಮೀನು ನೀಡುವಂತೆ ಸಂತ್ರಸ್ತೆ ಕೋರಿದ್ದಾರೆ. ತನ್ನ ಸ್ವಂತ ಅಭಿಪ್ರಾಯದಿಂದ ಈ ಮನವಿ ಸಲ್ಲಿಸುತ್ತಿದ್ದೇನೆ ಎಂದು ಕೂಡ ಸಂತ್ರಸ್ತೆ ಹೇಳಿದ್ದಾರೆ.

ಈ ಹಿಂದೆ ವಡಕ್ಕುಚೆರಿ ಸಂತ್ರಸ್ತೆಯನ್ನು ವಿವಾಹವಾಗಲು ಅನುಮತಿ ನೀಡುವಂತೆ ಕೋರಿ ಕೇರಳ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು, ಆದರೆ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಕಣ್ಣುರು ಸಮೀಪದ ಚರ್ಚ್‌ನಲ್ಲಿ ವಡಕ್ಕುಚೆರಿ ಪ್ಯಾರಿಶ್ ವಿರಾಕ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಚರ್ಚ್‌ ಶಾಲೆಯಲ್ಲಿ ಮ್ಯಾನೇಜರ್ ಆಗಿ ಕೂಡ ಇದ್ದರು.
ಈ ಸಂದರ್ಭದಲ್ಲಿ 10ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದರು.

2017ರ ಫೆಬ್ರವರಿ 7 ರಂದು ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು, ಈ ಹಿನ್ನೆಲೆಯಲ್ಲಿ ವಡಕ್ಕುಚೆರಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದರು, ಆ ಸಂದರ್ಭದಲ್ಲಿ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಿಂದ 2017ರ ಫೆಬ್ರವರಿ 27ರಂದು ಅವರನ್ನು ಪೊಲೀಸರು ಬಂಧಿಸಿದ್ದರು.

ಮತ್ತೊಂದು ಘಟನೆಯಲ್ಲಿ ಮೈಸೂರಿನ ಬಿಷಪ್ ಡಾ.ಕೆ.ಎಂ.ವಿಲಿಯಂ ಅವರು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ, ಈ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಚರ್ಚ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ಮೈಸೂರು ಬಿಷಪ್ ಡಾ.ಕೆ.ಎಂ.ವಿಲಿಯಂ ಅವರ ಮೇಲೆ ಬಂದಿದ್ದು, ಕಾನೂನು ಪ್ರಕಾರ ಬಿಷಪ್ ವಿಲಿಯಂ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಒಸಿಸಿ ಮುಖಂಡ ರಾಬರ್ಟ್ ರೋಸಾರಿಯೋ ಒತ್ತಾಯಿಸಿದ್ದರು.

ಚರ್ಚ್‌ನಲ್ಲಿ ಓರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದರು. ಮತ್ತಷ್ಟು ಮಾಹಿತಿ ನೀಡಿದ ಅವರು, ದೈಹಿಕ ಸಂಪರ್ಕಕ್ಕೆ ಆಕೆ ಒಪ್ಪದಿದ್ದಾಗ ಆಕೆಯನ್ನು ಕೆಲಸದಿಂದ ತೆಗಿಯುವ ಪ್ಲಾನ್ ಮಾಡಿದ್ದರು.

ಆ ಯುವತಿ ಇಡೀ ಘಟನೆ ಬಗ್ಗೆ ಒಂದು ವಿಡಿಯೋ ಮಾಡಿದ್ದಾಳೆ. ಆ ವಿಡಿಯೋದಲ್ಲಿ ಬಿಷಪ್ ಮಾಡಿರುವ ಎಲ್ಲ ಹಗರಣ ಹಾಗೂ ದೌರ್ಜನ್ಯದ ಮಾಹಿತಿ ನೀಡಿದ್ದಾಳೆ. ಆ ವಿಡಿಯೋದಲ್ಲಿ ಅಪಹರಣ, ಕೊಲೆ ಯತ್ನ ಹಾಗೂ ಬೆದರಿಕೆಯ ಎಲ್ಲ‌ ಮಾಹಿತಿ ನೀಡಿದ್ದಾಳೆ ಎಂದು ಹೇಳಿದ್ದರು.

English summary
The Supreme Court Monday dismissed the plea of a rape survivor from Kottiyoor, Kerala, who moved the Supreme Court seeking permission to marry her assaulter – a defrocked priest who is now undergoing 20 years imprisonment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X