ಮೇಲ್ಜಾತಿಗೆ ಮೀಸಲಾತಿ ಅನುಷ್ಠಾನ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂ ನಲ್ಲಿ ವಜಾ

ನವದೆಹಲಿ, ಜನವರಿ 25: ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ತೀರ್ಮಾನದ ಅನುಷ್ಠಾನಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಜ.9 ರಂದು ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಮೇಲ್ಜಾತಿಗೂ ಮೀಸಲಾತಿ ನೀಡುವ ಮಸೂದೆಯನ್ನು ಅಂಗೀಕರಿಸಲಾಗಿತ್ತು. ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇರುವ ಮೇಲ್ಜಾತಿಯವರಿಗೆ ಈ ಮೀಸಲಾತಿ ಅನ್ವಯವಾಗುತ್ತದೆ.

ಮೇಲ್ಜಾತಿಗೆ ಮೀಸಲಾತಿ ನೀಡುವ ಮಸೂದೆಯ ಅನುಷ್ಠಾನಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಾದರೂ, ಈ ಅರ್ಜಿಗೆ ಸಂಬಮಧಿಸಿದಂತೆ ಕೇಂದ್ರ ಸರ್ಕಾರ ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.

SC issues notice to Centre on 10% quota, refuses to stay its implementation

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೂ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸಂಪುಟ ಸಭೆಯ ನಿರ್ಣಯವನ್ನು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲೂ ಅಂಗೀಕರಿಸಲಾಗಿತ್ತು. ಈ ಸಂಬಂಧ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನೂ ಮಂಡಿಸಲಾಗಿತ್ತು.

ಕೇಂದ್ರ ಸರ್ಕಾರದ ಈ ನಿರ್ಣಯದಿಂದ ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇರುವ ಬ್ರಾಹ್ಮಣ, ರಜಪೂತ್, ಠಾಕೂರ್, ಬನಿಯಾ ,ಪಟೇಲ್, ಗುಜ್ಜರ್ ಹಾಗೂ ಜಾಟ್ ಜಾತಿಗಳಿಗೆ ಈ ಮೀಸಲಾತಿ ಸೌಲಭ್ಯ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+