ಮೋದಿ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಚು.ಆಯೋಗಕ್ಕೆ ಸುಪ್ರೀಂ ನೋಟಿಸ್
ನವದೆಹಲಿ, ಏಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಮಾಡಿದೆ.
ಬಿಜೆಪಿ ಸಮಾವೇಶಗಳಲ್ಲಿ ದ್ವೇಷಪೂರಿತ ಭಾಷಣ ಮಾಡುವುದು, ಪ್ರಚಾರದ ವೇಳೆ ಸೇನೆಯ ಹೆಸರನ್ನು ಬಳಕೆ ಮಾಡಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ
ಈ ಕುರಿತು ಚುನಾವಣಾ ಆಯೋಗಕ್ಕೆ ದಾಖಲಾಗಿರುವ ಪ್ರಕರಣ ಕುರಿತು ಇನ್ನೂ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಎಂದು ಕೋರಿ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಅವರು ಸೋಮವಾರ ಕೋರ್ಟ್‌ಗೆ ಸರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜ್ ಗೊಗೊಯ್ ನೇತೃತ್ವದ ಪೀಠವು ಮಂಗಳವಾರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಮೇ.2ಕ್ಕೆ ಮುಂದೂಡಿದೆ.












Click it and Unblock the Notifications