ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ. 2ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಲಸಿಕಾ ಕಾರ್ಯಕ್ರಮ

|
Google Oneindia Kannada News

ನವದೆಹಲಿ, ಮಾರ್ಚ್‌ 01: ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದ್ದು, 60 ವರ್ಷ ಮೇಲ್ಪಟ್ಟವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುತ್ತಿದೆ.

ಪ್ರಧಾನಿ ಮೋದಿ ಅವರು ದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಕೊರೊನಾ ಲಸಿಕೆ ಪಡೆದುಕೊಂಡಿದ್ದು, ಬಿಜೆಪಿಯ ಹಲವು ನಾಯಕರು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಹಾಗೂ ಅವರ ಕುಟುಂಬ ಸದಸ್ಯರಿಗೆ ಮಂಗಳವಾರ, ಮಾರ್ಚ್ 02ರಂದು ಕೊರೊನಾ ಲಸಿಕೆ ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ನೋಂದಣಿ ಕಚೇರಿ ಮೂಲಗಳು ತಿಳಿಸಿವೆ.

"ಬಾಳಿ ಬದುಕಬೇಕಾದ ಯುವಜನತೆಗೆ ಮೊದಲು ಲಸಿಕೆ ನೀಡಿ"

ಈ ಮುನ್ನ ನ್ಯಾಯಾಧೀಶರಿಗೆ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್‌ ಲಸಿಕೆ ನಡುವೆ ಆಯ್ಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ನ್ಯಾಯಾಧೀಶರಿಗೆ ಅಂಥ ಯಾವ ಆಯ್ಕೆಯನ್ನೂ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಲಸಿಕಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೋವಿನ್ ವ್ಯವಸ್ಥೆ ಮೂಲಕ ನಡೆಸಲಾಗುವುದು ಎಂದು ತಿಳಿಸಿದೆ.

SC Judges And Their Family Members To Be Vaccinated From March 02

ಸುಪ್ರೀಂ ಕೋರ್ಟ್‌ನಲ್ಲಿನ ಔಷಧಾಲಯವನ್ನೇ ಲಸಿಕೆ ನೀಡಲು ಬಳಸಿಕೊಳ್ಳಬಹುದು. ನಿವೃತ್ತಿಯಾಗಿರುವ ನ್ಯಾಯಾಧೀಶರು ಹಾಗೂ ಅವರ ಕುಟುಂಬ ಸದಸ್ಯರು ಮಂಗಳವಾರ ಲಸಿಕೆ ಪಡೆದುಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಜನವರಿ 16ರಿಂದ ಕೊರೊನಾ ಸೋಂಕಿನ ವಿರುದ್ಧ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಮಾರ್ಚ್ 01ರಿಂದ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಮೊದಲು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇತರೆ ಆರೋಗ್ಯ ಸಮಸ್ಯೆಗಳುಳ್ಳ 45 ವರ್ಷ ಮೇಲ್ಪಟ್ಟವರಿಗೆ ಕೂಡ ಲಸಿಕೆ ನೀಡಲಾಗುತ್ತದೆ.

ಕೊರೊನಾ ಲಸಿಕೆ ಪಡೆದ ಬಳಿಕ ನರ್ಸ್ ನಿವೇದಾಗೆ ಪ್ರಧಾನಿ ಮೋದಿ ಹೇಳಿದ್ದೇನು?ಕೊರೊನಾ ಲಸಿಕೆ ಪಡೆದ ಬಳಿಕ ನರ್ಸ್ ನಿವೇದಾಗೆ ಪ್ರಧಾನಿ ಮೋದಿ ಹೇಳಿದ್ದೇನು?

ಸರ್ಕಾರಿ ಕೇಂದ್ರಗಳಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ಲಭ್ಯವಿದ್ದು, ಖಾಸಗಿ ಕೇಂದ್ರಗಳಲ್ಲಿ 250 ರೂ ನೀಡಿ ಲಸಿಕೆ ಪಡೆದುಕೊಳ್ಳಬೇಕಾಗಿದೆ.

English summary
Supreme Court judges and their family members are likely to be administered with COVID-19 vaccine from Tuesday, March 02,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X