ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಧರ ಬಗ್ಗೆ ಸುಳ್ಳು ಆರೋಪ: ಶೆಹ್ಲಾ ರಶೀದ್ ವಿರುದ್ಧ ಕ್ರಿಮಿನಲ್ ಕೇಸ್

|
Google Oneindia Kannada News

ಶ್ರೀನಗರ, ಆಗಸ್ಟ್ 19: ಜಮ್ಮು ಕಾಶ್ಮೀರದಲ್ಲಿ ಯೋಧರು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿರುವ ಶೆಹ್ಲಾ ರಶೀದ್ ವಿರುದ್ಧ ಸುಪ್ರೀಂಕೋರ್ಟ್ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರು ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಜಮ್ಮು ಕಾಶ್ಮೀರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಗಲಾಟೆ ನಡೆಯುತ್ತಿದೆ ಎಂದು ನಿಮಗೆ ಯಾರು ಹೇಳಿದ್ದು ಎಂದು ಭಾರತೀಯ ಯೋಧರು ಶೆಹ್ಲಾ ರಶೀದ್‌ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

 ನಾಗರಿಕರ ಮೇಲೆ ದೌರ್ಜನ್ಯ: ಶೆಹ್ಲಾ ರಶೀದ್ ಆರೋಪ ನಿರಾಕರಿಸಿದ ಸೇನೆ ನಾಗರಿಕರ ಮೇಲೆ ದೌರ್ಜನ್ಯ: ಶೆಹ್ಲಾ ರಶೀದ್ ಆರೋಪ ನಿರಾಕರಿಸಿದ ಸೇನೆ

ಜಮ್ಮು ಕಾಶ್ಮೀರದಲ್ಲಿ ಸಾರ್ವಜನಿಕರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಶೆಹ್ಲಾ ರಶೀದ್ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸೇನೆ ಹೇಳಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಭಾರತ ರದ್ದುಗೊಳಿಸಿದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಪರಿಸ್ಥಿತಿ ಕುರಿತು ಸಾಕಷ್ಟು ತಪ್ಪು ಮಾಹಿತಿಗಳು ಲಭ್ಯವಾಗುತ್ತಿದೆ.

SC Lawyer Filed A Complaint Against Shehla Rashid

ಕೆಲವೇ ದಿನಗಳ ಹಿಂದೆ ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ 10 ಸಾವಿರಕ್ಕೂ ಹೆಚ್ಚು ಮಂದಿಯಿಂದ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಮತ್ತೆ ಅಂಥದ್ದೇ ತಪ್ಪು ಮಾಹಿತಿ ನೀಡಿ ಜನರನ್ನು ಹೆದರಿಸುವ ಪ್ರಯತ್ನವಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.

ಸುಪ್ರೀಂಕೋರ್ಟ್ ವಕೀಲ ಅಲಖ್ ಅಲೋಕ್ ಶ್ರೀವಸ್ತವ್ ಅವರು ಶೆಹ್ಲಾ ವಿರುದ್ಧ ದೂರು ದಾಖಲಿಸಿದ್ದಾರೆ.

ಶಾಪಿಯನ್‌ನಲ್ಲಿ ಯೋಧರು ಒಂದು ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಶೆಹ್ಲಾ ಅವರು ಹೇಳಿರುವ ಪ್ರಕಾರ ಜಮ್ಮು ಕಾಶ್ಮೀರದಲ್ಲಿ ಪೆಟ್ರೋಲ್, ಡೀಸೆಲ್ ದೊರೆಯುತ್ತಿದೆ. ಸಾರ್ವಜನಿಕರು ನೆಮ್ಮದಿಯಿಂದ ಎಂದಿನಂತೆ ಓಡಾಡಬಹುದಾಗಿದೆ ಎಂದು ಹೇಳಿ ಜನರ ದಾರಿ ತಪ್ಪಿಸಲು ಪ್ರಯತ್ನ ಪಟ್ಟಿದ್ದರು.

ಜಮ್ಮು ಮತ್ತು ಕಾಶ್ಮೀರದ ಪೊಲೀಸರಿಗೆ ಕಾನೂನು ಸುವ್ಯವಸ್ಥೆಯ ಮೇಲೆ ಯಾವುದೇ ಅಧಿಕಾರ ಇಲ್ಲ ಎಂದು ಜನರು ಹೇಳುತ್ತಿದ್ದಾರೆ. ಅವರನ್ನು ಅಧಿಕಾರಹೀನರನ್ನಾಗಿ ಮಾಡಲಾಗಿದೆ.

ಎಲ್ಲವೂ ಸಂಸದೀಯ ಶಕ್ತಿಗಳ ಕೈಯಲ್ಲಿವೆ. ಸಿಆರ್‌ಪಿಎಫ್ ಸಿಬ್ಬಂದಿಯೊಬ್ಬರ ದೂರಿನ ಮೇರೆಗೆ ಒಬ್ಬ ಸ್ಟೇಷನ್ ಹೌಸ್ ಮಾಸ್ಟರ್ (ಎಸ್‌ಎಚ್‌ಓ) ಅವರನ್ನು ವರ್ಗಾವಣೆ ಮಾಡಲಾಗಿದೆ. ಎಸ್‌ಎಚ್‌ಓಗಳು ಲಾಠಿಗಳನ್ನು ಹಿಡಿದು ಓಡಾಡುತ್ತಿದ್ದಾರೆ. ಅವರ ಬಳಿ ಸರ್ವೀಸ್ ರಿವಾಲ್ವರ್‌ಗಳು ಕಾಣಿಸುತ್ತಿಲ್ಲ' ಎಂದು ಹೇಳಿದ್ದರು.

English summary
Alakh Alok Srivastava, a Supreme Court lawyer, has also filed Criminal complaint against Shehla Rashid over the fake allegations on Indian Army.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X