ಸಿಂಗ್ ದಂಗೆ ಅಪರಾಧಿ ಸಜ್ಜನ್‌ಗೆ ಜಾಮೀನು, ಸಿಬಿಐಗೆ ಸುಪ್ರೀಂ ನೋಟಿಸ್
ನವದೆಹಲಿ, ಆಗಸ್ಟ್ 25: ಸಿಖ್ ಹತ್ಯಾಕಾಂಡ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ಸಿನ ಮಾಜಿ ಮುಖಂಡ ಸಜ್ಜನ್ ಕುಮಾರ್ (77) ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪದೇ ಪದೇ ತಿರಸ್ಕರಿಸಿದೆ. ವೈದ್ಯಕೀಯ ಕಾರಣಕ್ಕೆ ಜಾಮೀನು ಅರ್ಜಿ ಕೋರಲಾಗಿದೆ. ಸಜ್ಜನ್ ಕುಮಾರ್ ಅವರು ಆಸ್ಪತ್ರೆಯಲ್ಲಿ ದಾಖಲಾಗುವ ಅಗತ್ಯವಿಲ್ಲ ಎಂದು ವರದಿ ಬಂದಿದೆ ಹೀಗಾಗಿ ಜಾಮೀನು ನೀಡುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
2018ರ ಡಿಸೆಂಬರ್ ತಿಂಗಳಿನಿಂದ ಜೈಲಿನಲ್ಲಿರುವ ಸಜ್ಜನ್ ಕುಮಾರ್ ಅವರು ಸುಮಾರು 8 ರಿಂದ 10 ಕೆ.ಜಿ ತೂಕ ಕಳೆದುಕೊಂಡಿದ್ದಾರೆ, ಮಧ್ಯಂತರ ಜಾಮೀನು ನೀಡಬೇಕು ಎಂದು ಸಜ್ಜನ್ ಕುಮಾರ್ ಪರ ವಕೀಲ ವಿಕಾಸ್ ಸಿಂಗ್ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಕೇಂದ್ರ ತನಿಖಾ ತಂಡ ಸಿಬಿಐಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ. ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠವು ಸಿಬಿಐಗೆ ಈ ಬಗ್ಗೆ ಪ್ರತಿಕ್ರಿಯಿಸಲು ಸೂಚಿಸಿದೆ.
ವೈದ್ಯಕೀಯ ಕಾರಣಕ್ಕಾಗಿ ಶಿಕ್ಷೆ ಪ್ರಮಾಣ ಕಡಿತ, ಮಧ್ಯಂತರ ಜಾಮೀನು ಕುರಿತಂತೆ ತನಿಖಾ ತಂಡದ ಪ್ರತಿಕ್ರಿಯೆ ಅಗತ್ಯ ಎಂದು ಸುಪ್ರೀಂಕೋರ್ಟ್ ಪರಿಗಣಿಸಿದೆ.

ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ
''ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 77 ವರ್ಷ ವಯಸ್ಸಿನ ಸಜ್ಜನ್ ಕುಮಾರ್ ಆರೋಗ್ಯ ಕ್ಷೀಣಿಸುತ್ತಿದೆ ಎಂದು ವಕೀಲರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಬಿಐ ಪರಿಶೀಲನೆ ನಡೆಸಿ ಇನ್ನೊಂದು ವಾರದಲ್ಲಿ ತನ್ನ ಅಫಿಡವಿಟ್ ಸಲ್ಲಿಸಲಿ,'' ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ಸಫ್ದರ್ಜಂಗ್ ಆಸ್ಪತ್ರೆ ಐಸಿಯುವಿನಲ್ಲಿರುವ ಸಜ್ಜನ್ ಅವರಿಗೆ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಬೇಕು, ಅವರ ಆರೈಕೆಗೆ ಒಬ್ಬರ ನೆರವಿನ ಅಗತ್ಯವಿದೆ, ಪ್ರತಿನಿತ್ಯ ಸ್ನಾನ, ಶೌಚಾಲಯ, ಆಹಾರ ಸೇವನೆಗೂ ಇನ್ನೊಬ್ಬರ ಮೇಲೆ ಅವಲಂಬಿತರಾಗಬೇಕಾಗುತ್ತದೆ ಎಂದು ಸಜ್ಜನ್ ಕುಮಾರ್ ಪರ ವಕೀಲ ಅಜಯ್ ಮರ್ವಾಹ್ ಅರ್ಜಿಯಲ್ಲಿ ತಿಳಿಸಿದ್ದರು.

ಹಿರಿಯ ವಕೀಲ ವಿಕಾಸ್ ಸಿಂಗ್ ವಾದ
ಮತ್ತೊಬ್ಬ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಏಕೆ ಬೇಕು ಎಂಬುದಕ್ಕೆ ದಾಖಲೆ ಒದಗಿಸಿ, colonoscopy ಇರುವುದು ಮೇದಾಂತದಲ್ಲಿ ಮಾತ್ರ ಎಂದಿದ್ದಾರೆ. ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕುಟುಂಬಸ್ಥರು ಬಯಸಿದ್ದಾರೆ. ಇದಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ.
ಆದರೆ, ಪ್ರತಿ ವಾದ ಮಂಡಿಸಿದ ಸಂತ್ರಸ್ತರ ಪರ ವಕೀಲ ದುಶ್ಯಂತ್ ದವೆ, ಮಾರ್ಚ್ ತಿಂಗಳಲ್ಲಿ ಏಮ್ಸ್ ವೈದ್ಯರು ನೀಡಿದ ವರದಿ ಪ್ರಕಾರ ಸಜ್ಜನ್ ಕುಮಾರ್ ಅವರಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಅಥವಾ ಬೇರೆ ಆಸ್ಪತ್ರೆ ಅಗತ್ಯವಿಲ್ಲ ಹೀಗಾಗಿ ಮೇದಾಂತಕ್ಕೆ ಶಿಫ್ಟ್ ಮಾಡುವುದು ಅನಗತ್ಯ ಎಂದಿದ್ದಾರೆ.

ಸಿಖ್ ನರಮೇಧ ಪ್ರಕರಣ:
1984ರ ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು. ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಿಂಸಾಚಾರಕ್ಕೆ ಬೆಂಬಲ ನೀಡಿದ ಆರೋಪದ ಎರಡು ಪ್ರಕರಣವನ್ನೂ ಅವರು ಎದುರಿಸುತ್ತಿದ್ದರು. ಆರೋಪಿಗಳ ವಿರುದ್ಧ ಕ್ರಿಮಿನಲ್ ಸಂಚು, ಗಲಭೆ, ಅಕ್ರಮ ಶಸ್ತ್ರಾಸ್ತ್ರ, ಕೊಲೆ, ಕೊಲೆ ಯತ್ನ ಸೇರಿದಂತೆ ಐಪಿಸಿ ಸೆಕ್ಷನ್ 452,302,307,324,395,436 ಹಾಗೂ 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನೆಹರೂ-ಇಂದಿರಾ ಗಾಂಧಿ ಕುಟುಂಬದ ನಿಷ್ಠಾವಂತ ಸಜ್ಜನ್
1984ರಲ್ಲಿ ದೆಹಲಿಯ ಮಹಿಪಾಲ್ಪುರ್ ಪ್ರದೇಶದಲ್ಲಿ ಇಬ್ಬರು ಸಿಖ್ಖರನ್ನು ಕೊಂದ ಆರೋಪದ ಮೇಲೆ ಯಶ್ ಪಾಲ್ ಸಿಂಗ್ ಎಂಬ ಅಪರಾಧಿಗೆ ಗಲ್ಲು ಶಿಕ್ಷೆ ಘೋಷಿಸಲಾಗಿತ್ತು. ಮತ್ತೊಬ್ಬ ಅಪರಾಧಿ ನರೇಶ್ ಸೆಹ್ರಾವತ್‌ಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು.
ಸಜ್ಜನ್ ಕುಮಾರ್ ಅವರೊಂದಿಗೆ ಕ್ಯಾ.ಭಾಗ್ಮಲ್, ಗಿರಿದರ್ ಲಾಲ್ ಮತ್ತು ಕಾಂಗ್ರೆಸ್ಸಿನ ಮಾಜಿ ಕೌನ್ಸೆಲರ್ ಬಲ್ವಾನ್ ಖೋಖರ್ ಅವರನ್ನೂ ದೋಷಿಗಳೆಂದು ಪರಿಗಣಿಸಿ, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಿಶನ್ ಖೊಕ್ಕರ್ಮತ್ತು ಮಾಜಿ ಶಾಸಕ ಮಹೇಂದರ್ ಯಾದವ್ ಅವರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದೆಹಲಿಯ ಹೊರ ವಲಯದಲ್ಲಿ ಹುಟ್ಟಿ ಬೆಳೆದ ಸಜ್ಜನ್ ಕುಮಾರ್, ನೆಹರೂ-ಇಂದಿರಾ ಗಾಂಧಿ ಕುಟುಂಬದ ನಿಷ್ಠಾವಂತ. ಕಾಂಗ್ರೆಸ್‌ನ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಜಾಟ್ ಸಮುದಾಯದ ಪ್ರಭಾವಿ ಮುಖಂಡರೂ ಹೌದು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications