ಪ್ರಸವಪೂರ್ವ ಲಿಂಗ ಪತ್ತೆ AD ಗೂಗಲ್ ಗೆ ಸುಪ್ರೀಂ ತರಾಟೆ
ನವದೆಹಲಿ, ಜುಲೈ 06: ಪ್ರಸವಪೂರ್ವ ಲಿಂಗ ಪತ್ತೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಿರುವ ಆನ್ ಲೈನ್ ಸರ್ಚ್ ಇಂಜಿನ್ ಸಂಸ್ಥೆ ಗೂಗಲ್, ಯಾಹೂ ಹಾಗೂ ಮೈಕ್ರೋಸಾಫ್ಟ್ ಸಂಸ್ಥೆಗಳನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಈ ರೀತಿ ಜಾಹೀರಾತು ಪ್ರಕಟಿಸುವ ಮೂಲಕ ಭಾರತದ ಕಾನೂನು ಉಲ್ಲಂಘಿಸಲಾಗಿದೆ. ಕಾನೂನುಬಾಹಿರ ಜಾಹೀರಾತು ತಡೆಗೆ ಮಾರ್ಗೋಪಾಯಗಳನ್ನು ಕಂಡು ಹಿಡಿಯಲು 10 ದಿನಗಳೊಳಗೆ ತಾಂತ್ರಿಕ ತಜ್ಞರು ಮತ್ತು ಆನ್‌ಲೈನ್ ಕಂಪೆನಿಗಳ ಪ್ರತಿನಿಧಿಗಳ ಸಭೆಯನ್ನು ಕರೆಯುವಂತೆ ಕಂಪೆನಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಆರ್. ಭಾನುಮತಿ ಅವರನ್ನನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಕ್ರಮ ಜರುಗಿಸುವಂತೆ ಸೂಚಿಸಿದೆ. ದೇಶದಲ್ಲಿ ಹೆಣ್ಣು ಮಕ್ಕಳ ಪ್ರಮಾಣ ಇಳಿಮುಖ ಆಗುತ್ತಿರುವ ಬಗ್ಗೆ ನ್ಯಾಯಾಲಯದ ಅಭಿಪ್ರಾಯ ಕೋರಿ ಡಾ. ಸಾಬು ಮ್ಯಾಥ್ಯೂ ಜಾರ್ಜ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಹೆಣ್ಣು ಭ್ರೂಣ ಹತ್ಯೆ ತಡೆಯುವ ಉದ್ದೇಶದಿಂದಲೇ 1994ರಲ್ಲಿ ಗರ್ಭಧಾರಣೆ ನಂತರ ಮತ್ತು ಪ್ರಸವಪೂರ್ವ ಲಿಂಗಪತ್ತೆ ಪರೀಕ್ಷೆ ನಿಷೇಧ ಕಾಯ್ದೆ[Pre-Conception and Pre-Natal Diagnostic Techniques (PCPNDT) Act]ಯನ್ನು ಜಾರಿಗೆ ತರಲಾಗಿದೆ.ಆನ್‌ಲೈನ್ ಕಂಪೆನಿಗಳು ವೆಬ್‌ಸೈಟ್‌ಗಳಲ್ಲಿ ಪ್ರಸವಪೂರ್ವ ಲಿಂಗ ಪತ್ತೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸುವ ಮೂಲಕ ದೇಶದ ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ದೂರಿನಲ್ಲಿ ಹೇಳಲಾಗಿದೆ. (ಪಿಟಿಐ)
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications