ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾ. ಗೊಗೊಯ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ವರದಿ ಬಹಿರಂಗ ಅಸಾಧ್ಯ ಎಂದ ಸುಪ್ರೀಂ

|
Google Oneindia Kannada News

ನವದೆಹಲಿ, ಮಾರ್ಚ್ 18: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣಾ ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿ ಗೊಗೊಯ್ ವಿರುದ್ಧ ಪ್ರಕರಣದ ವಿಚಾರಣಾ ವರದಿಯನ್ನು ನೀಡುವಂತೆ ಕೋರಿ ಸಲ್ಲಿಸಿದ ಮಾಹಿತಿ ಹಕ್ಕು ಅರ್ಜಿಯನ್ನು ಸುಪ್ರೀಂಕೋರ್ಟ್ ರಿಜಿಸ್ಟ್ರಿ ತಿರಸ್ಕರಿಸಿದೆ.

ಗೊಗೋಯಿಗೆ ಕಪ್ಪು ಚುಕ್ಕೆಯಾಗಿ ಉಳಿದ ಲೈಂಗಿಕ ಕಿರುಕುಳ ಕೇಸ್ಗೊಗೋಯಿಗೆ ಕಪ್ಪು ಚುಕ್ಕೆಯಾಗಿ ಉಳಿದ ಲೈಂಗಿಕ ಕಿರುಕುಳ ಕೇಸ್

ವಿಚಾರಣಾ ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠವೇ ಅಭಿಪ್ರಾಯಪಟ್ಟು, ವರದಿಯ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರಪಡಿಸುತ್ತಿದೆ.

SC Refuses To Disclose Probe Report Into Conspiracy Against Former CJI Ranjan Gogoi

ಇದಲ್ಲದೆ ವಿಚಾರಣಾ ವರದಿಯನ್ನು ನೀಡಿದ್ದ ನ್ಯಾ. ಎಕೆ ಪಟ್ನಾಯಕ್ ದೂರಿನ ಹಿಂದೆ ಷಡ್ಯಂತ್ರವಿರುವುದಾಗಿ ಅಭಿಪ್ರಾಯಪಟ್ಟಿದ್ದರು. ಕಳೆದ ಲೋಕಸಭಾ ಅಧಿವೇಶನದ ಅವಧಿಯಲ್ಲಿ ಈ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿತ್ತು. ನ್ಯಾ. ಗೊಗೊಯ್ ಆಡಳಿತಾರೂಢ ಪಕ್ಷದ ಪರವಾಗಿದ್ದರು ಹಾಗಾಗಿ ಅವರ ಪ್ರಕರಣವನ್ನು ಮುಚ್ಚಿಹಾಕಿ, ರಾಜ್ಯಸಭಾ ಸದಸ್ಯತ್ವವನ್ನು ನೀಡಲಾಗಿದೆ ಎಂದು ಟಿಎಂಸಿ ಸಂಸದೆ ಆರೋಪಿಸಿದ್ದರು.

ಆ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈಗ ಸುಪ್ರೀಂಕೋರ್ಟ್ ರಿಜಿಸ್ಟ್ರಿ ಹೇಳಿರುವುದು ಪ್ರಕರಣಕ್ಕೆ ತೆರೆ ಎಳೆದಂತಾಗಿದೆ.

English summary
The public information officer of the Supreme Court has refused to disclose details of a report filed by retired Supreme Court judge, Justice AK Patnaik, on the investigation into a “larger conspiracy” behind the allegations of sexual harassment against former Chief Justice of India Ranjan Gogoi, Live Law reported on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X