ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಫೀಲ್ ಖಾನ್ ಬಂಧನ ರದ್ದು ಪ್ರಕರಣ: ಮಧ್ಯಪ್ರವೇಶಿಸಲು ಸುಪ್ರೀಂ ನಕಾರ

|
Google Oneindia Kannada News

ನವದೆಹಲಿ, ಡಿಸೆಂಬರ್ 17: ರಾಷ್ಟ್ರೀಯ ಭದ್ರತಾ ಕಾಯ್ದೆಯಲ್ಲಿ ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾಬಾದ್ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.

ಸಿಎಎ ಪ್ರತಿಭಟನೆ ವೇಳೆ ಅವಹೇಳನಕಾರಿ ಹೇಳಿಕೆ: ಡಾ. ಕಫೀಲ್ ಖಾನ್ ಬಂಧನಸಿಎಎ ಪ್ರತಿಭಟನೆ ವೇಳೆ ಅವಹೇಳನಕಾರಿ ಹೇಳಿಕೆ: ಡಾ. ಕಫೀಲ್ ಖಾನ್ ಬಂಧನ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದಿರುವ ಪ್ರತಿಭಟನೆಯ ವೇಳೆ ಅಲಿಗಢ ಮುಸ್ಲಿಂ ಯೂನಿವರ್ಸಿಟಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಡಾ. ಕಫೀಲ್ ಖಾನ್‌ರನ್ನು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಿ ಮಥುರಾ ಜೈಲಿನಲ್ಲಿರಿಸಲಾಗಿತ್ತು.

SC Refuses To Interfere With HC Order Quashing Detention Of Kafeel Khan Under NSA

ಸೆಪ್ಟೆಂಬರ್‌ನಲ್ಲಿ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಗೋವಿಂದ್ ಮಾಥುರ್ ಹಾಗೂ ಜಸ್ಟಿಸ್ ಸುಮಿತ್ರಾ ದಯಾಳ್ ಸಿಂಗ್ಸೆಪ್ಟೆಂಬರ್ 1ರಂದು ಹೈಕೋರ್ಟ್ ನೀಡಿರುವ ಆದೇಶದಲ್ಲಿ ಖಾನ್ ಬಂಧನ ಆದೇಶವನ್ನು ರದ್ದುಪಡಿಸಿದ್ದು, ಈ ಆದೇಶದಲ್ಲಿ ಮಧ್ಯಪ್ರವೇಶಿಸುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಭಾರತದ ಮುಖ್ಯ ನ್ಯಾಯಾಧೀಶ ಎಸ್‌ಎ ಬೋಬ್ಡೆ ಹಾಗೂ ಜಸ್ಟಿಸ್‌ಗಳಾದ ಎಎಸ್ ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣ್ಯಂ ಅವರಿದ್ದ ಮೂವರು ಸದಸ್ಯರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.

ಖಾನ್ ತನ್ನ ಭಾಷಣದಲ್ಲಿ ಹಿಂಸೆ ಹಾಗೂ ದ್ವೇಷಿಸುವಂತೆ ಕರೆ ನೀಡಿರಲಿಲ್ಲ. ಅವರು ರಾಷ್ಟ್ರೀಯ ಸಮಗ್ರತೆ ಹಾಗೂ ಏಕತೆಗಾಗಿ ಕರೆ ನೀಡಿದ್ದರು ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ವಿವರಿಸಿತ್ತು.

English summary
The Uttar Pradesh government today lost its case in the Supreme Court seeking tough charges against a doctor, Kafeel Khan, under the National Security Act (NSA) for a speech against the amended citizenship law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X