ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ಹಯ್ಯ ವಿರುದ್ಧ ದೇಶದ್ರೋಹ ಪ್ರಕರಣ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

|
Google Oneindia Kannada News

ನವದೆಹಲಿ, ಫೆಬ್ರವರಿ 24: ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯು) ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಭಾಷಣಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಜೆಎನ್ ಯು ಆವರಣದಲ್ಲಿ ಫೆಬ್ರವರಿ 9, 2016ರಂದು ನಡೆದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಜೆಎನ್​ಯು ಮಾಜಿ ವಿದ್ಯಾರ್ಥಿಗಳಾದ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಅಖಿಬ್ ಹುಸ್ಸೇನ್ , ಮುಜೀಬ್ ಹುಸ್ಸೇನ್, ಮುನೀಬ್ ಹುಸ್ಸೇನ್, ಉಮರ್ ಗುಲ್, ರಯೀಬ್, ಬಸೀರ್ ಭಟ್ ಮತ್ತು ಬಶರತ್ ವಿರುದ್ಧ ಇಂದು ಚಾರ್ಜ್​ಶೀಟ್​ ದಾಖಲಿಸಲಾಗಿತ್ತು.

ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಹತ್ಯೆಗೆ ಯತ್ನಸಿಪಿಐ ನಾಯಕ ಕನ್ಹಯ್ಯ ಕುಮಾರ್ ಹತ್ಯೆಗೆ ಯತ್ನ

ಸಂಸತ್​ ಭವನದ ಮೇಲೆ ದಾಳಿ ನಡೆಸಿದ ಪ್ರಕರಣದ ಪ್ರಮುಖ ರೂವಾರಿ ಅಫ್ಜಲ್​ ಗುರುನನ್ನು ನೇಣಿಗೆ ಏರಿಸಿದ್ದನ್ನು ಖಂಡಿಸಿ ಈ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್​ನಲ್ಲಿ ವಿರೋಧಿಸಿದ್ದರು. ಆ ನಂತರ ಇವರನ್ನು ಬಂಧಿಸಿದ್ದು ದೇಶಾದ್ಯಂತ ದೊಡ್ಡ ವಿವಾದ ಸೃಷ್ಟಿಸಿತ್ತು. ಪೊಲೀಸರು ಆಡಳಿತಾರೂಢ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ವಿರೋಧ ಪಕ್ಷ ಆರೋಪಿಸಿತ್ತು.

SC Rejects Plea For Sanction In Kanhaiya Kumar Sedition Case

ಕನ್ಹಯ್ಯ ಕುಮಾರ್ ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ವಿಚಾರದ ಕುರಿತು ಏಪ್ರಿಲ್ 3ರೊಳಗೆ ಪ್ರಗತಿ ವರದಿ ನೀಡಬೇಕು ಎಂದು ಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು.

ಇದೀಗ ನಾವು ಯಾವುದೇ ನಿರ್ದೇಶನವನ್ನು ಸರ್ಕಾರಕ್ಕೆ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.ಬಿಜೆಪಿ ಮುಖಂಡ ನಂದ್ ಕಿಶೋರ್ ಗರ್ಗ್ ಅವರು ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ನಾವು ಯಾವುದೇ ಕಾರಣಕ್ಕೂ ಇಂತಃ ಅರ್ಜಿಯನ್ನು ಮಾನ್ಯ ಮಾಡುವುದಿಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಬರಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

English summary
The Supreme Court on Monday dismissed a plea by BJP leader Nand Kishore Garg seeking direction to the Delhi government to sanction the prosecution of former Jawaharlal Nehru University students’ union president and CPI leader Kanhaiya Kumar in the 2016 JNU sedition case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X