• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೈತರು ಪ್ರತಿಭಟಿಸಬಹುದು, ಆದರೆ ರಸ್ತೆ ತಡೆಯುವಂತಿಲ್ಲ: ಸುಪ್ರೀಂ

|
Google Oneindia Kannada News

ನವದೆಹಲಿ, ಅಕ್ಟೋಬರ್ 21: ರೈತರಿಗೆ ಪ್ರತಿಭಟಿಸುವ ಹಕ್ಕಿದೆ ಆದರೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ರೈತರಿಗೆ ಹೋರಾಟ ಮಾಡುವ ಪ್ರತಿಭಟಿಸುವ ಹಕ್ಕಿದೆ ಆದರೆ ಎಲ್ಲೆಂದರಲ್ಲಿ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವಂತಿಲ್ಲ ಎಂದು ಹೇಳಿದೆ.

ಭಾರತದಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಿಸಿದ ಕೇಂದ್ರ ಸರ್ಕಾರಭಾರತದಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಿಸಿದ ಕೇಂದ್ರ ಸರ್ಕಾರ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರೈತ ಸಂಘಟನೆ ನೇತೃತ್ವದಲ್ಲಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ರೈಲು ಮಾರ್ಗ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸಿ ಹಲವು ಬಾರಿ ಧರಣಿ ನಡೆಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ರೈಲು ಮಾರ್ಗ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸಿ ಹಲವು ಬಾರಿ ಧರಣಿ ನಡೆಸಿದ್ದಾರೆ. ಇದರ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ, ಆದರೆ ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ನಿರ್ಬಂಧಿಸಲು ಅಲ್ಲ ಎಂದು ಕೋರ್ಟ್​ ಹೇಳಿದೆ.

ಇದರ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ರೈಲು-ರಸ್ತೆ ಮಾರ್ಗಗಳಿಗೆ ಅಡ್ಡವಾಗಿ ಕುಳಿತಿರುವ ಪ್ರತಿಭಟನಾ ರೈತರು ಅಲ್ಲಿಂದ ಜಾಗ ಖಾಲಿ ಮಾಡುವಂತೆ ಅರ್ಜಿಯಲ್ಲಿ ಆಗ್ರಹಿಸಲಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಕೆಎಂ, ರಸ್ತೆ ನಿರ್ವಹಣೆಯನ್ನು ಪೊಲೀಸರು ಉತ್ತಮವಾಗಿ ಮಾಡಬಹುದು. ಅವರಿಗೆ ನಿರ್ವಹಿಸಲು ಸಾಧ್ಯವಾಗದಿದ್ದರೆ ರೈತರಿಗೆ ದೆಹಲಿಯ ರಾಮ್ ಲೀಲಾ ಮೈದಾನ ಅಥವಾ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡಬೇಕು ಎಂದು ತಿಳಿಸಿತು.

ಈ ಅರ್ಜಿಗೆ ಅಫಿಡವಿಟ್​ ಸಲ್ಲಿಸುವಂತೆ ರೈತ ಸಂಘಗಳಿಗೆ ಕೇಳಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಿದೆ.

ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್ ಮತ್ತು ಸಿ.ಟಿ.ರವಿಕುಮಾರ್ ಅವರ ನೇತೃತ್ವದ ನ್ಯಾಯಪೀಠವು, ಸಂಯುಕ್ತ ಕಿಸಾನ್ ಮೋರ್ಚಾಗೆ ರಸ್ತೆ ತಡೆಯುವ ಹಕ್ಕು ಇದೆಯೇ ಎಂದು ಪ್ರಶ್ನಿಸಿದೆ. ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಹೇಳಿದೆ.

ನಿಮ್ಮ ಪ್ರತಿಭಟನೆ ಯಾವುದರ ವಿರುದ್ಧ ಎಂದು ಕೇಳಿದ್ದ ಸುಪ್ರೀಂ: ಮೂರು ಹೊಸ ಕೃಷಿ ಕಾನೂನುಗಳನ್ನು ಈಗಾಗಲೇ ತಡೆಹಿಡಿಯಲಾಗಿದೆ. ಶಾಸನಗಳೇ ಚಾಲ್ತಿಯಲ್ಲಿಲ್ಲದಿದ್ದಾಗ ನೀವು ಯಾವುದರ ವಿರುದ್ಧ ಪ್ರತಿಭಟಿಸುತ್ತಿದ್ದೀರಾ ಎಂದು ರೈತರ ಸಂಘಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.

ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಸಿ ಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ ಮೇಲೂ ಪ್ರತಿಭಟನೆ ನಡೆಸುವ ಪ್ರಶ್ನೆಯಿದೆಯಾ ಎಂದು ಹೇಳಿದ್ದರು.

ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರವನ್ನು ಉಲ್ಲೇಖಿಸಿದ್ದು ಅಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಪೀಠ ಹೇಳಿತು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ಒಮ್ಮೆ ಈ ವಿಷಯವು ಅತ್ಯುನ್ನತ ಸಾಂವಿಧಾನಿಕ ನ್ಯಾಯಾಲಯದ ಮುಂದೆ ಇದ್ದಾಗ, ಅದೇ ವಿಷಯದ ಮೇಲೆ ಯಾರೂ ಬೀದಿಗಿಳಿಯುವಂತಿಲ್ಲ ಎಂದು ಹೇಳಿದ್ದರು.

ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಮತ್ತು ಇಲ್ಲಿನ ಜಂತರ್ ಮಂತರ್‌ನಲ್ಲಿ 'ಸತ್ಯಾಗ್ರಹ' ನಡೆಸಲು ಅನುಮತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.

ರೈತರು ಮತ್ತು ಕೃಷಿಕರ ಸಂಘಟನೆಯಾದ 'ಕಿಸಾನ್ ಮಹಾಪಂಚಾಯತ್' ಮತ್ತು ಅದರ ಅಧ್ಯಕ್ಷರು ಶಾಂತಿಯುತ ಮತ್ತು ಅಹಿಂಸಾತ್ಮಕ 'ಸತ್ಯಾಗ್ರಹ'ವನ್ನು ಆಯೋಜಿಸಲು ಜಂತರ್ ಮಂತರ್‌ನಲ್ಲಿ ಕನಿಷ್ಠ 200 ರೈತರು ಅಥವಾ ಪ್ರತಿಭಟನಾಕಾರರಿಗೆ ಸ್ಥಳಾವಕಾಶ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ್ದರು.

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ(ಬಡ್ತಿ ಮತ್ತು ಸೌಲಭ್ಯ) ಕಾಯ್ದೆ 2020, ಅಗತ್ಯ ಸರಕುಗಳ(ತಿದ್ದುಪಡಿ) ಕಾಯ್ದೆ 2020 ಮತ್ತು ರೈತರ(ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಒಪ್ಪಂದ ಸೇವಾ ಕಾಯ್ದೆ 2020ಗಳನ್ನು ವಿರೋಧಿ ದೆಹಲಿಯ ಗಡಿಯಲ್ಲಿ ಹಲವಾರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
The Supreme Court today said that the farmers have the right to protest but roads can’t be blocked indefinitely.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X