ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈನ ಆಶ್ರಯ ಮನೆಯಲ್ಲಿನ 35 ಮಕ್ಕಳಿಗೆ ಕೊರೊನಾ ಪಾಸಿಟಿವ್: ಸರ್ಕಾರದಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

|
Google Oneindia Kannada News

ನವದೆಹಲಿ ಜೂನ್ 11: ಚೆನ್ನೈನ ಆಶ್ರಯ ಮನೆಯೊಂದರ 35 ಮಕ್ಕಳಿಗೆ ಕೋವಿಡ್ -19 ಪಾಸಿಟಿವ್ ವರದಿ ಬಂದ ಬಳಿಕ ಸುಪ್ರೀಂ ಕೋರ್ಟ್‌ ಗುರುವಾರ ತಮಿಳುನಾಡು ಸರ್ಕಾರದಿಂದ ಸದ್ಯದ ಸ್ಥಿತಿ ಮತ್ತು ಉತ್ತರವನ್ನು ಕೋರಿದೆ.

Recommended Video

DK Shivakumar finally gets good news from BS Yediyurappa | Oneindia Kannada

ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು "ತಮಿಳುನಾಡಿನ ಆಶ್ರಯ ಮನೆಯಲ್ಲಿ 35 ಮಕ್ಕಳನ್ನು ಕೋವಿಡ್‌ ಪಾಸಿಟಿವ್ ಪತ್ತೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಮಿಳುನಾಡು ರಾಜ್ಯ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ವಾರ್ಡನ್, ಕೋವಿಡ್ ಪಾಸಿಟಿವ್ ಆಗಿದ್ದರಿಂದ ನಿಮಗೆ ಇದನ್ನು ತಿಳಿಸಲಾಗಿದೆ.

15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಬೇಕು- ಸುಪ್ರೀಂಕೋರ್ಟ್15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಬೇಕು- ಸುಪ್ರೀಂಕೋರ್ಟ್

ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಎಸ್.ರವೀಂದ್ರ ಭಟ್ ಅವರನ್ನೂ ಒಳಗೊಂಡ ನ್ಯಾಯಪೀಠ, ಆಶ್ರಯ ಮನೆಯಲ್ಲಿ ಕೋವಿಡ್ -19 ಹರಡುವಿಕೆ ಮತ್ತು ಇತರರ ಆರೋಗ್ಯ ಸಂರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಆರೋಗ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಆದೇಶಿಸಿದೆ.

SC Seeks Report From TN On 35 Shelter Children Testing Covid-19 Positive

ಈ ಪ್ರಕರಣವನ್ನು ಮುಂದಿನ ಜೂನ್ 15 ರಂದು ವಿಚಾರಣೆ ನಡೆಸಲಾಗುವುದು.

ಸುಪ್ರೀಂಕೋರ್ಟ್ ಆದೇಶದಿಂದ ನಿಟ್ಟುಸಿರು ಬಿಟ್ಟ ವಲಸೆ ಕಾರ್ಮಿಕರುಸುಪ್ರೀಂಕೋರ್ಟ್ ಆದೇಶದಿಂದ ನಿಟ್ಟುಸಿರು ಬಿಟ್ಟ ವಲಸೆ ಕಾರ್ಮಿಕರು

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ದೇಶಾದ್ಯಂತ ಆಶ್ರಯ ಮನೆಗಳಲ್ಲಿ ವಾಸಿಸುವ ಮಕ್ಕಳ ಸುರಕ್ಷತೆಯ ದೊಡ್ಡ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಉನ್ನತ ನ್ಯಾಯಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ಕೋರಿದೆ.

English summary
The SC on Thursday sought a status report and a reply from the Tamil Nadu government in the case of 35 children of a shelter home in Chennai testing positive for covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X